logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಪೋಲಿಯೋ ನಿರ್ಮೂಲನೆಗೆ ಸಹಕರಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಟ್ರೆಂಡಿಂಗ್
share whatsappshare facebookshare telegram
27 Feb 2022
post image

ಉಡುಪಿ, : ಎಲ್ಲಾ ಪೋಷಕರು 0-5 ವರ್ಷದೊಳಗಿನ ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸುವ ಮೂಲಕ ವಿಶ್ವದಿಂದ ಪೋಲೀಯೋವನ್ನು ನಿರ್ಮೂಲನೆ ಮಾಡಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು, ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭಾರತದಲ್ಲಿ 2011 ರಿಂದ ಪೋಲಿಯೋ ಪ್ರಕರಣಗಳು ಕಂಡುಬAದಿಲ್ಲ ಆದರೆ ಪಕ್ಕದ ದೇಶದಲ್ಲಿ ಪೋಲಿಯೋ ಪ್ರಕರಣಗಳು ಕಂಡು ಬಂದಿದ್ದು, ಆ ದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೂಲಕ ಹರಡುವ ಸಾಧ್ಯತೆಗಳಿದ್ದು, ಆದ್ದರಿಂದ ಎಲ್ಲಾ ಪೋಷಕರು ತಮ್ಮ 0-5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಇಡೀ ಜಗತ್ತಿನಿಂದ ಪೋಲಿಯೋ ನಿರ್ಮೂಲನೆ ಮಾಡಲು ಎಲ್ಲರೂ ಸಹಕರಿಸಬೇಕು ಎಂದರು. ಜಿಲ್ಲೆಯಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ 0-5 ವರ್ಷದೊಳಗಿನ 73995 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಗುರಿ ಹೊಂದಿದ್ದು, ಗ್ರಾಮೀಣ ಪ್ರದೇಶದಲ್ಲಿ 571 ಹಾಗೂ ನಗರ ಪ್ರದೇಶದಲ್ಲಿ 91 ಸೇರಿದಂತೆ ಒಟ್ಟು 662 ಲಸಿಕಾ ಕೇಂದ್ರಗಳನ್ನು ಮತ್ತು 6 ಮೊಬೈಲ್ ಟೀಮ್ ಮತ್ತು 36 ಟ್ರಾನ್ಸಿಟ್ ಬೂತ್ಗಳನ್ನು ತರೆಯಲಾಗಿದೆ. 2794 ಲಸಿಕಾ ಸ್ವಯಂಸೇವಕರು ಮತ್ತು 125 ಮೇಲ್ವಿಚಾರಕರು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಲಿದ್ದು, ರೋಟರಿ ಹಾಗೂ ಇತರ ಸ್ವಯಂಸೇವಾ ಸಂಸ್ಥೆಗಳು ಅಗತ್ಯ ಸಹಕಾರ ನೀಡುತ್ತಿವೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಎಂ.ಜಿ.ರಾಮ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಡುಪ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹಣ್ಯ ಶೇರಿಗಾರ್ , ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಸ್ವರ್ಣಲತಾ, ರೋಟರಿ ಅಧ್ಯಕ್ಷ ಸುರೇಶ್ ಶೆಣ್ಯೆ, ಐ.ಕೆ. ಜಯಚಂದ್ರ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಣಾಧಿಕಾರಿ ಡಾ. ನಾಗಭೂಷಣ ಉಡುಪ ಸ್ವಾಗತಿಸಿದರು, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ವಂದಿಸಿದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.