



ಕಾರ್ಕಳ : ಇಲಾಖೆಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ ಆಡಳಿತ ಯಂತ್ರಕ್ಕೆ ವೇಗ ನೀಡಲು ಸಹಕಾರಿ ಎಂದು ಸಚಿವ ವಿ ಸುನೀಲ್ ಕುಮಾರ್ ಹೇಳಿದರು ಕಾರ್ಕಳ ತಾಲೂಕಿನ ಕಛೇರಿಯಲ್ಲಿ ನಡೆದ ಕಡತ ವಿಲೇವಾರಿ ಸಪ್ತಾಹ ಕರ‍್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವರು ನ.೧೯ ರಂದು ಕಾರ್ಕಳ ತಾಲೂಕಿನಲ್ಲಿ ಕಂದಾಯ ಮೇಳ ನಡೆಯಲಿದ್ದು ಕಂದಾಯ ಸಚಿವರು ಭಾಗವಹಿಸಲಿದ್ದಾರೆ . ತಾಲೂಕಿನ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ವಿತರಣೆ ಮಾಡಿ ಇಲಾಖೆಗಳನ್ನು ಜನಸ್ನೇಹಿಯನ್ನಾಗಿ ಮಾಡಲಾಗುವುದು . ಅದರಂತೆಯೆ ದಿನ ನಿತ್ಯ ಕಡತ ವಿಲೇವಾರಿಯಾದ ಸಂಪೂರ್ಣ ಮಾಹಿತಿಯನ್ನು ನನಗೆ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು . ಕಾರ್ಯಕ್ರಮದಲ್ಲಿ ಕುಂದಾಪುರ ಸಹಾಯಕ ಕಮಿಷನರ್ ರಾಜು ಪುರಸಭೆ ಮುಖ್ಯಾಧಿಕಾರಿ ರೂಪ ಶೆಟ್ಟಿ, ಪುರಸಭಾ ಅಧ್ಯಕ್ಷೆ ಸುಮಾ ಕೇಶವ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ , ತಹಶೀಲ್ದಾರ್ ಪುರಂದರ, ಉಪಸ್ಥಿತರಿದ್ದರು. ಸಂಜಯ್ ಕಾರ್ಯಕ್ರಮ ನಿರ್ವಹಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.