



ನವದೆಹಲಿ: ಹೋಳಿ ಹಬ್ಬದ ಬಳಿಕ ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣದಲ್ಲಿ ತೀವ್ರ ಹೆಚ್ಚಳವಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 444 ಕೊರೋನಾ ಸೋಂಕಿನ ಪ್ರಕರಣ ದೃಢಪಟ್ಟಿದೆ. ತಮಿಳುನಾಡಿನಲ್ಲಿ ಕೊರೋನಾದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ದೇಶದಲ್ಲಿ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ ಇದೀಗ 3890ಕ್ಕೆ ಏರಿದೆ. ಕೊರೋನಾದಿಂದಾಗಿ ಇದುವರೆಗೆ ದೇಶದಲ್ಲಿ 5, 30, 782 ಮಂದಿ ಮೃತಪಟ್ಟಿದ್ದಾರೆ.
ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವುದನ್ನು ಕೇಂದ್ರ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಎಲ್ಲ ಸರ್ಕಾರಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.