



ನವದೆಹಲಿ: ಕಳೆದ 24ಗಂಟೆಗಳಲ್ಲಿ 16,764 ದಾಖಲೆ ಪ್ರಮಾಣದ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 220 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,81,080ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 1,270ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು 450 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ದೆಹಲಿಯಲ್ಲಿ 320, ಕೇರಳದಲ್ಲಿ 109, ಗುಜರಾತ್ ನಲ್ಲಿ 97, ರಾಜಸ್ಥಾನದಲ್ಲಿ 69, ತೆಲಂಗಾಣದಲ್ಲಿ 62, ತಮಿಳುನಾಡಿನಲ್ಲಿ 46, ಕರ್ನಾಟಕದಲ್ಲಿ 34 ಪ್ರಕರಣಗಳು ವರದಿಯಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.