



ದೇಶದಲ್ಲಿ ನಿರಂತರವಾಗಿ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಮತ್ತೊಂದು ಕಡೆ ವ್ಯಾಕ್ಸಿನೇಷನ್ 83 ಕೋಟಿಯ ಗಡಿ ದಾಟಿ ಮುನ್ನುಗ್ಗುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಮನೆ-ಮನೆಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಅನುಮತಿ ನೀಡಿದೆ. ಇದಕ್ಕಾಗಿ ಸರ್ಕಾರ ಹೊಸ ಮಾರ್ಗಸೂಚಿಯನ್ನು ಸಹ ಪ್ರಕಟಿಸಿದೆ. ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪಾಲ್ ಗುರುವಾರ ಡೋರ್ ಟು ಡೋರ್ ವ್ಯಾಕ್ಸಿನ್ ಕುರಿತು ಮಾಹಿತಿ ನೀಡಿದರು. ಲಸಿಕಾ ಕೇಂದ್ರಗಳಿಗೆ ತೆರಳಲು ಸಾಧ್ಯವಾಗದಂತಹ ಜನರಿಗೆ ವ್ಯಾಕ್ಸಿನ್ ತಲುಪಿಸುವ ನಿಟ್ಟಿನಲ್ಲಿ ಡೋರ್ ಟು ಡೋರ್ ಲಸಿಕಾಕರಣಕ್ಕೆ ಚಾಲನೆ ನೀಡಲಾಗುತ್ತಿದೆ. ಈ ಸಂಬಂಧ ಲಸಿಕೆ ಅಭಿಯಾನ ಹೇಗಿರಬೇಕು ಎಂಬುದರ ಬಗ್ಗೆ ವಿವರವಾದ ಮಾರ್ಗಸೂಚಿ ಸಹ ಸಿದ್ಧಪಡಿಸಲಾಗಿದೆ. ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆ ನೀಡಲು ವಿಶೇಷ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಪಾಲ್ ಹೇಳಿದರು. 6 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳು ಶೇ.100ರಷ್ಟು ಮೊದಲ ಡೋಸ್ ಪಡೆದುಕೊಂಡಿವೆ. ಇದರಲ್ಲಿ ಲಕ್ಷದ್ವೀಪ, ಚಂಡೀಗಢ, ಗೋವಾ, ಹಿಮಾಚಲ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ಹಾಗೂ ಸಿಕ್ಕಿಂ ಇವೆ. 4 ರಾಜ್ಯ/ಕೇಂದ್ರಾಡಳಿತ ಪ್ರದೇಶ ಶೇ.90ಕ್ಕೂ ಹೆಚ್ಚು ಮೊದಲ ಡೋಸ್ ಪಡೆದುಜಕೊಂಡಿವೆ. ಇದರಲ್ಲಿ ದಾದ್ರಾ ಮತ್ತು ನಗರ್ ಹವೇಲಿ, ಕೇರಳ, ಲಡಾಕ್ ಮತ್ತು ಉತ್ತರಾಖಂಡ್ ಸೇರಿವೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.