logo
WhatsApp Image 2026-04-02 at 14.46.04.jpeg
hindalco everlast.jpeg

ಅ.21 ರಂದು ಶಾಲಾ ಶಿಕ್ಷಕರ ನೇಮಕಾತಿಗೆ ಕೌನ್ಸಲಿಂಗ್

ಟ್ರೆಂಡಿಂಗ್
share whatsappshare facebookshare telegram
20 Oct 2023
post image

ಉಡುಪಿ: ಸರಕಾರಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8 ನೇ ತರಗತಿ) ನೇಮಕಾತಿ -2022 ರ ನೇಮಕಾತಿಗೆ ಸಂಬಂಧಿಸಿದಂತೆ 2023 ರ ಮಾರ್ಚ್ 8 ರಂದು ಪ್ರಕಟಿಸಲಾದ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್ https:schooleducation.karnataka.gov.in ನಲ್ಲಿ ಪ್ರಕಟಿಸಲಾಗಿರುತ್ತದೆ. ಸದರಿ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಅಕ್ಟೋಬರ್ 21 ರಂದು ಬೆಳಗ್ಗೆ 10.30 ಕ್ಕೆ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ವಿಭಾಗ) ಇಲ್ಲಿನ ಸವ್ಯಸಾಚಿ ಸಭಾಭವನದಲ್ಲಿ ಕೌನ್ಸಲಿಂಗ್ ನಡೆಯಲಿದ್ದು, ಆಯ್ಕೆಗೊಂಡ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧ ಪಟ್ಟ ಅಗತ್ಯ ದಾಖಲೆ ಹಾಗೂ ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2574878 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.