



ತಿರುನಂತರಪುರ: ಕೇರಳದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ದೃಢಪಟ್ಟಿದೆ, ಭಾರತದಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್ ಪ್ರಕರಣ ದೃಢಪಟ್ಟಿದೆ. ಕೇರಳದಲ್ಲಿ ಯುಎಇಯಿಂದ ಬಂದಿದ್ದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಗೋಚರಿಸಿದ್ದವು. ಬಳಿಕ ಆರೋಗ್ಯ ಸಚಿವರು ಸ್ಯಾಂಪಲ್ ಅನ್ನು ಪುಣೆ ಲ್ಯಾಬ್ ಗೆ ಕಳುಹಿಸಿದ್ದರು.
ಮಂಕಿಪಾಕ್ಸ್ ಒಂದು ವೈರಲ್ ಝೂನೋಟಿಕ್ ಕಾಯಿಲೆಯಾಗಿದ್ದು, ಸಿಡುಬಿನಂತೆಯೇ ರೋಗಲಕ್ಷಣಗಳನ್ನು ಹೊಂದಿರುತ್ತದೆ. ಈ ರೋಗದ ಹರಡುವಿಕೆ ವೇಗವಾಗಿದ್ದರೂ ಅದರಿಂದ ಜೀವ ಕಳೆದುಕೊಳ್ಳುವ ಆತಂಕ ಕಡಿಮೆ ಎನ್ನಲಾಗಿದೆ.
ಜ್ವರ, ತಲೆ ನೋವು, ಬೆನ್ನು ನೋವು, ಸ್ನಾಯು ನೋವು, ಚಳಿ ಹಾಗೂ ಬಳಲಿಕೆ, ಜ್ವರದೊಂದಿಗೆ ದೇಹದ ಬೇರೆ ಭಾಗಗಳಿಗೆ ಹರಡುವುದಕ್ಕೂ ಮುನ್ನ, ಮುಖ, ಕೈ ಕಾಲುಗಳಲ್ಲಿ ದದ್ದು ಹೊರಹೊಮ್ಮುತ್ತದೆ. ಬಳಿಕ ಬಾಯಿಯ ಒಳಗೆ, ಕಾರ್ನಿಯಾ, ಜನನಾಂಗಗಳಲ್ಲೂ ಕಾಣಿಸಿಕೊಳ್ಳಬಹುದಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.