



ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗಂಗಾವತಿ ಶಾಸಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿ ಅವರ ಆಸ್ತಿ ಜಪ್ತಿ ಮಾಡುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 100ಕ್ಕೂ ಹೆಚ್ಚು ಆಸ್ತಿಗಳನ್ನು ಜಪ್ತಿ ಮಾಡುವಂತೆ ವಿಶೇಷ ಕೋರ್ಟ್ ಆದೇಶ ಪ್ರಕಟಿಸಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ತನಿಖೆ ವೇಳೆ ಸೈಟ್, ಕಟ್ಟಡ, ಖಾಲಿ ಜಮೀನು ಸೇರಿದಂತೆ ನೂರಕ್ಕೂ ಅಧಿಕ ಆಸ್ತಿಗಳನ್ನು ಸಿಬಿಐ ಪತ್ತೆ ಮಾಡಿತ್ತು.
ಇದೀಗ ಕೋರ್ಟ್ ಜಪ್ತಿಗೆ ಆದೇಶ ಹೊರಡಿಸಿರುವುದರಿಂದ ರೆಡ್ಡಿಗೆ ಸಂಕಷ್ಟ ಎದುರಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.