logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಸೌಜನ್ಯ ಪ್ರಕರಣದ ಮರುತನಿಖೆ: ದಾಖಲೆಗಳ ಕಂತೆ ಹಿಡಿದು ಎಸ್‌ಐಟಿ ಕಚೇರಿಗೆ ಬಂದ ಗಿರೀಶ್ ಮಟ್ಟಣ್ಣನವರ್

ಟ್ರೆಂಡಿಂಗ್
share whatsappshare facebookshare telegram
23 Nov 2026
post image

ಮಂಗಳೂರು:** ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ಮಂಗಳೂರಿನ ಎಸ್‌ಐಟಿ ಕಚೇರಿಗೆ ದಾಖಲೆಗಳ ಬ್ಯಾಗ್‌ನೊಂದಿಗೆ ಆಗಮಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ತನಿಖಾಧಿಕಾರಿಗಳಿಗೆ ಸಲ್ಲಿಸುವಂತೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹಲವು ಕಡತಗಳು ಮತ್ತು ಪತ್ರಿಕಾ ವರದಿಗಳನ್ನು ಸಂಗ್ರಹಿಸಿ ಅವರು ಕಚೇರಿಗೆ ಬಂದಿದ್ದಾರೆ. ಹಲವು ವರ್ಷಗಳಿಂದ ಸೌಜನ್ಯ ಪರ ಹೋರಾಟ ನಡೆಸುತ್ತಿರುವ ಮಟ್ಟಣ್ಣನವರ್, ತಮ್ಮಲ್ಲಿರುವ ಮಾಹಿತಿಯನ್ನು ಅಧಿಕಾರಿಗಳಿಗೆ ಒದಗಿಸುವ ಸಾಧ್ಯತೆಯಿದೆ.

ಇದೇ ವೇಳೆ, ಪ್ರಕರಣದ ವಿಚಾರವಾಗಿ ಮಹೇಶ್ ಶೆಟ್ಟಿ ತಿಮರೋಡಿಗೂ ಎಸ್‌ಐಟಿ ಬುಲಾವ್ ನೀಡಿದೆ ಎಂದು ತಿಳಿದುಬಂದಿದೆ.

ಗಿರೀಶ್ ಮಟ್ಟಣ್ಣನವರ್ ರಿಟ್ ಅರ್ಜಿ ವಜಾ

ಇನ್ನೊಂದೆಡೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಬಹುಚರ್ಚಿತ ಬುರುಡೆ ಪ್ರಕರಣದ (ಕ್ರೈಂ ನಂಬರ್ 39/2026) ತನಿಖೆ ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು.

ಪ್ರಕರಣದ ಹಿನ್ನೆಲೆ

ಧರ್ಮಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದೊಂದಿಗೆ ಮುಸುಕುಧಾರಿ ವ್ಯಕ್ತಿಯೊಬ್ಬ ನೀಡಿದ ಹೇಳಿಕೆಯ ಆಧಾರದ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆ ಪರಿಗಣಿಸಿದ ರಾಜ್ಯ ಸರ್ಕಾರ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.