



ನವದೆಹಲಿ: ಕೋವಿಡ್ ಲಸಿಕೆ ಅಭಿಯಾನದಲ್ಲಿ ಇಂದು ಭಾರತ ಹೊಸ ದಾಖಲೆ ನಿರ್ಮಾಣ ಮಾಡಿದ್ದು, ದೇಶದಲ್ಲಿ 100 ಕೋಟಿ ಡೋಸ್ ಪೂರ್ಣಗೊಂಡಿದೆ.
ಭಾರತದಲ್ಲಿ 9 ತಿಂಗಳಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು, ವಿಶ್ವದಲ್ಲೇ ಅತಿ ಹೆಚ್ಚು ಕೋವಿಡ್ ಲಸಿಕೆ ನೀಡಿದ ದೇಶ ಭಾರತವಾಗಿದೆ.ಭಾರತದಲ್ಲಿ ನೀಡಲಾದ ಕೋವಿಡ್-19 ಲಸಿಕೆ ಡೋಸ್ ಗಳ ಸಂಖ್ಯೆ 100 ಕೋಟಿ ಗಡಿ ದಾಟುತ್ತಿದ್ದಂತೆ ಪ್ರಧಾನಿ ಮೋದಿ ಅವರು ಆರ್ ಎಂಎಲ್ ಆಸ್ಪತ್ರೆಗೆ ಭೇಟಿ ನೀಡಿದರು.ಆರೋಗ್ಯ ಕಾರ್ಯಕರ್ತರೊಂದಿಗೆ ಮಾತನಾಡಲಿದ್ದಾರೆ. ಜೊತೆಗೆ 100 ಕೋಟಿ ಡೋಸ್ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೆಂಪು ಕೋಟೆಯ ಮೇಲೆ ಅತಿ ದೊಡ್ಡ ತ್ರಿವರ್ಣ ಧ್ವಜ ಪ್ರದರ್ಶನ ಮಾಡಲಾಗುವುದು ಎಂದಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.