



ನವದೆಹಲಿ: ಭಾರತೀಯ ಕ್ರಿಕೆಟ್ ದಂತಕಥೆ, ಭಾರತರತ್ನ ಸಚಿನ್ ತೆಂಡೂಲ್ಕರ್ ಅವರು ಮತದಾರರ ಜಾಗೃತಿ ಮತ್ತು ಮತದಾನದ ಕುರಿತು ಜನರಲ್ಲಿ ಅರಿವು ಮೂಡಿಸಲು ಭಾರತದ ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್ ಆಗಿ ಬುಧವಾರ (ಆ.23) ಹೊಸ ಇನ್ನಿಂಗ್ಸ್ ಪ್ರಾರಂಭಿಸಲಿದ್ದಾರೆ.
ಮೂರು ವರ್ಷಗಳ ಕಾಲ ಮತದಾರರ ಜಾಗೃತಿ ರಾಯಭಾರಿಯಾಗಿರಲು ತೆಂಡೂಲ್ಕರ್ ಅವರೊಂದಿಗೆ ಬುಧವಾರ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕುವುದಾಗಿ ಭಾರತೀಯ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ಮುಂಬರುವ ಚುನಾವಣೆಗಳಲ್ಲಿ ವಿಶೇಷವಾಗಿ 2024 ರ ಲೋಕಸಭೆ ಚುನಾವಣೆಯಲ್ಲಿ ಮತದಾರರ ಭಾಗವಹಿಸುವಿಕೆಯನ್ನು ಹೆಚ್ಚಿಸುವಲ್ಲಿ ಈ ಸಹಯೋಗ ಪ್ರಮುಖ ಪಾತ್ರ ವಹಿಸಲಿದೆ.
ಯುವಜನರಲ್ಲಿ ಮತದಾನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತೆಂಡೂಲ್ಕರ್ ವರ್ಚಸ್ಸು ಮಹತ್ವದ ಪರಿಣಾಮ ಬೀರಲಿದೆ. ಈ ಪಾಲುದಾರಿಕೆಯ ಮೂಲಕ ಸಾಮಾನ್ಯ ನಾಗರಿಕರು, ಯುವಕರು ಮತ್ತು ನಗರ ಜನಸಂಖ್ಯೆಯ ನಡುವಿನ ಮತದಾನದ ಅಂತರವನ್ನು ಕಡಿಮೆ ಮಾಡುವ ಗುರಿ ಹೊಂದಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.