logo
WhatsApp Image 2026-04-02 at 14.46.04.jpeg
hindalco everlast.jpeg

ಕಾಪು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕ್ರಿಕೆಟ್ ಪಟು ಆಸ್ಪತ್ರೆಯಲ್ಲಿ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
18 Nov 2021
post image

ಪಡುಬಿದ್ರಿ: ಬೆಳಪುವಿನ ಬದ್ರಿಯಾ ಮಸೀದಿ ಬಳಿ ಕಳೆದ ಶುಕ್ರವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಮೃತ ಸವಾರನನ್ನು ಬೆಳಪುವಿನ ಫರಾನ್ ಆಲಿ (21) ಎಂದು ಗುರುತಿಸಲಾಗಿದೆ. ಕಳೆದ ಶುಕ್ರವಾರ ತಡ ರಾತ್ರಿ ಪುಂಚಲಕಾಡಿನಿಂದ ಬೆಳಪುಗೆ ಬರುವ ವೇಳೆ ಬದ್ರಿಯಾ ಮಸೀದಿ ಬಳಿ ಫರಾನ್ ಬೈಕ್ ಹೋರಿಗೆ ಢಿಕ್ಕಿಯಾಗಿತ್ತು. ಅಪಘಾತದ ತೀವ್ರತೆಗೆ ಫರಾನ್ ಆಲಿಯ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಸ್ಥಳೀಯರು ಆತನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ  ದಾಖಲು ಮಾಡಿದ್ದರು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಫರಾನ್ ಆಲಿ ದುಬೈಯಲ್ಲಿ ಉದ್ಯೋಗದಲ್ಲಿದ್ದು, ನಾಲ್ಕು ತಿಂಗಳ ಹಿಂದೆ ರಜೆಯಲ್ಲಿ ಮರಳಿದ್ದರು. ಬೆಳಪುವಿನ ಬೆಸ್ಟ್ ಬೆಳಪ ಕ್ರಿಕೆಟ್ ತಂಡದ ಸದಸ್ಯರಾಗಿದ್ದು, ಉತ್ತಮ ಆಟಗಾರನಾಗಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.