



ಹಾವೇರಿ: ಗೃಹಲಕ್ಷ್ಮೀ ಯೋಜನೆಗೆ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿಯಿದ್ದರೆ ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಗಳವಾರ ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಿದೆ. ಜೂನ್ ತಿಂಗಳಲ್ಲಿ ಸ್ವಲ್ಪ ಕೊರತೆಯಾಗಿತ್ತು. ಜುಲೈ ತಿಂಗಳಲ್ಲಿ ವಾಡಿಕೆಗಿಂತ ಮಳೆ ಹೆಚ್ಚಾಗಿದೆ ಎಂದರು.
ಹಾವೇರಿಯಲ್ಲಿ ರೈತರು ಮರಣಹೊಂದಿರುವ ಹಿನ್ನೆಲೆ ಅಲ್ಲಿಗೆ ಭೇಟಿ ನೀಡುತ್ತಿದ್ದು, ಮಳೆ ಹೆಚ್ಚಾಗಿ ಬಿದ್ದಿರುವ ಕಡೆ ತಂಡಗಳನ್ನು ಮಾಡಿಕೊಂಡು ಭೇಟಿ ನೀಡಲಾಗುವುದು. ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು. ಇಂದು ಸಚಿವ ಕೃಷ್ಣ ಬೈರೇಗೌಡ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ ಎಂದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.