logo
WhatsApp Image 2026-04-02 at 14.46.04.jpeg
hindalco everlast.jpeg

ಕಂಬಳ ಕ್ಷೇತ್ರದ ಉಸೇನ್ ಬೋಲ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್ ದೂರು: ಯಾಕೆ? ಏನು ಕಾರಣ? ಮುಂದಕ್ಕೆ ಓದಿ

ಟ್ರೆಂಡಿಂಗ್
share whatsappshare facebookshare telegram
20 Jul 2022
post image

ಮಂಗಳೂರು: ಕಂಬಳ ಕ್ಷೇತ್ರದ  ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕೇಸು ದಾಖಲಾಗಿದೆ. ಅದೂ ಕೂಡ ಕ್ರಿಮಿನಲ್ ದೂರು ದಾಖಲಿಸಲಾಗಿದೆ. ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ಬುಕ್ ಆಗಿದೆ. ಹಾಗಾದರೆ, ಇದು ಏನು ಪ್ರಕರಣ ನೋಡೋಣ ಬನ್ನಿ..

ಬೋಲ್ಟ್ ದಾಖಲೆ ಮುರಿದ ಶ್ರೀನಿವಾಸ ಗೌಡ ವಿರುದ್ಧ ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬುವವರು ದೂರು ನೀಡಿದ್ದಾರೆ. ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ, ನಕಲಿ ದಾಖಲೆ ಸೃಷ್ಟಿಸಿ ಸರಕಾರದ ಹಣ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಅಕಾಡೆಮಿಯ ಗುಣಪಾಲ ಕಡಂಬ ಮತ್ತು ಲೇಸರ್ ಬೀಮ್ ಮೂಲಕ ಕಂಬಳದ ಫಲಿತಾಂಶ ಘೋಷಿಸುವ ಸೈ ವೀವ್ ಮಾಲೀಕ ರತ್ನಾಕರ ಎಂಬವರ ವಿರುದ್ಧವೂ ಕ್ರಿಮಿನಲ್ ದೂರು ನೀಡಲಾಗಿದೆ.

ಅಧಿಕೃತ ಮಾನ್ಯತೆ ಪಡೆಯದ, ನಂಬಲಾರ್ಹವಲ್ಲದ ಸೈವೀವ್ ಸಂಸ್ಥೆಯಿಂದ ಸುಳ್ಳು ತೀರ್ಪಿನ ದಾಖಲೆ ನೀಡಲಾಗಿದೆ ಎನ್ನಲಾಗುತ್ತಿದೆ. ಪೊಲೀಸರು ತನಿಖೆ ನಡೆಸದೇ ಇದ್ದರೆ ನ್ಯಾಯಾಲಯದಲ್ಲಿ ಖಾಸಗಿ ದಾವೆ ಹೂಡುವುದಾಗಿ ಹೇಳಲಾಗಿದೆ.

2020ರ ಫೆ.1ರಂದು ಐಕಳ ಕಂಬಳದಲ್ಲಿ 100 ಮೀ. ದೂರವನ್ನು 9.5 ಸೆಕೆಂಡ್ ನಲ್ಲಿ ಶ್ರೀನಿವಾಸ ಗೌಡ ಕ್ರಮಿಸಿದ್ದರು.

2009ರಲ್ಲಿ ಉಸೇನ್ ಬೋಲ್ಟ್ 100 ಮೀ. ಅನ್ನು 9.58 ಸೆಕೆಂಡ್‌ನಲ್ಲಿ ಕ್ರಮಿಸಿದ ದಾಖಲೆ ಉಡೀಸ್ ಮಾಡಿದ್ದರು. ರಾಜ್ಯ ಸರ್ಕಾರ ಸೇರಿ ದೇಶದ ಹಲವು ಸಂಸ್ಥೆಗಳು ಶ್ರೀನಿವಾಸ ಗೌಡಗೆ ನೆರವು ನೀಡಿದ್ದವು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.