



ಸೂರತ್: ಪ್ರಧಾನಿ ಮೋದಿಯವರ ಉಪನಾಮ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಟೀಕೆ ಸಂಬಂಧ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿದೆ.
ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಹೂಡಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ಸೂರತ್ ನ್ಯಾಯಾಲಯವು ಈ ತೀರ್ಪು ನೀಡಿದೆ.
ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡಿರುವುದು ಹೇಗೆ ಎಂಬ ಟೀಕೆಗಳ ಮೇಲೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ದೂರು ನೀಡಿದ್ದರು.
ರಾಹುಲ್ ಅವರು ಐದು ವರ್ಷಗಳ ಹಿಂದೆ ಅಂದರೆ 2019ರ ಲೋಕಸಭೆ ಚುನಾವಣಾ ವೇಳೆ ಕರ್ನಾಟಕದ ಕೋಲಾರದಲ್ಲಿ ನಡೆದಿದ್ದ ರ‍್ಯಾಲಿಯಲ್ಲಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ‘ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ ಎಂದು ರಾಹುಲ್ ಪ್ರಶ್ನಿಸಿದ್ದರು.
ನ್ಯಾಯಾಲಯವು ಕಳೆದ ವಾರ ಎರಡೂ ಕಡೆಯ ಅಂತಿಮ ವಾದಗಳನ್ನು ಆಲಿಸಿದ್ದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎಚ್ ಎಚ್ ಶರ್ಮಾ ತೀರ್ಪು ಕಾಯ್ದಿರಿಸಿದ್ದರು.
ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 499 ಮತ್ತು 500 (ಮಾನನಷ್ಟ ವ್ಯವಹರಿಸುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರಾಹುಲ್ ಗಾಂಧಿ ಅವರು ಕೊನೆಯದಾಗಿ 2021ರ ಅಕ್ಟೋಬರ್‌ನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಸೂರತ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ರಾಹುಲ್ ಅವರು ತಮ್ಮ ಹೇಳಿಕೆ ಮೂಲಕ ಮೋದಿ ಉಪನಾಮ ಹೊಂದಿರುವವರನ್ನೆಲ್ಲಾ ಹಿಯಾಳಿಸಿದ್ದಾರೆ ಎಂದು ಆರೋಪಿಸಿದ್ದ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.