logo
WhatsApp Image 2026-04-02 at 14.46.04.jpeg
hindalco everlast.jpeg

ಸಾಂಸ್ಕೃತಿಕ ಸ್ಪರ್ಧೆ ಜ್ಞಾನಾಭಿವೃದ್ಧಿ, ಆತ್ಮಸ್ಥೈರ್ಯಕ್ಕೆ ಪೂರಕ : ನಾಗರಾಜ್ ನಾಯ್ಕಡ

ಟ್ರೆಂಡಿಂಗ್
share whatsappshare facebookshare telegram
29 Nov 2023
post image

ಹೆಬ್ರಿ: ಜ್ಞಾನಾಭಿವೃದ್ಧಿ, ಆತ್ಮಸ್ಥೈರ್ಯವನ್ನು ಹೆಚ್ಚಿಸುವಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು ಪೂರಕವಾಗಲಿದೆ. ವಿದ್ಯಾರ್ಥಿಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೆಬ್ರಿ ತಾಲೂಕಿನ ತಹಶೀಲ್ದಾರ್ ನಾಗರಾಜ್ ನಾಯ್ಕಡ ಅವರು ಹೇಳಿದರು. ಇವರು, ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ ಹಾಗೂ ಎಸ್. ಆರ್. ಪದವಿ ಪೂರ್ವ ಕಾಲೇಜು, ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಾಂಸ್ಕೃತಿಕ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್. ನಾಗರಾಜ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಬೌದ್ಧಿಕ ವಿಕಸನಕ್ಕೆ ಇಂತಹ ಸಾಂಸ್ಕೃತಿಕ ಸ್ಪರ್ಧೆಗಳು ಸಹಾಯಕವಾಗಲಿದೆ. ಈ ಬಾರಿಯ ಸಾಂಸ್ಕೃತಿಕ ಸ್ಪರ್ಧೆಯನ್ನು ಆಯೋಜಿಸುವ ಜವಾಬ್ದಾರಿ ಹೆಬ್ರಿ ತಾಲೂಕಿಗೆ ದೊರೆತಿರುವುದು ಸಂತಸದ ವಿಚಾರ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹೆಬ್ರಿ ಗ್ರಾಮ ಪಂಚಾಯಿತಿಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸದಾಶಿವ ಶೇರ್ವೆಗಾರ್ ಅವರು ಮಾತನಾಡಿ, ಅನೇಕ ಕಾಲೇಜುಗಳಿಂದ ವಿದ್ಯಾರ್ಥಿಗಳು ಈ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇ ಒಂದು ಸಾಧನೆ. ಅದುವೇ ನಿಮ್ಮ ಯಶಸ್ಸು. ಸ್ಪರ್ಧೆಯಲ್ಲಿ ಬಹುಮಾನ ಪಡೆಯದ ವಿದ್ಯಾರ್ಥಿಗಳು ಮತ್ತೆ ಪ್ರಯತ್ನವನ್ನು ಮಾಡಿ ಮುನ್ನಡೆಯಿರಿ ಎಂದರು. ಕಾರ್ಯಕ್ರಮದಲ್ಲಿ ಹೆಬ್ರಿ ತಾಲೂಕಿಗೆ ಹೊಸದಾಗಿ ನೇಮಕವಾದ ತಹಶೀಲ್ದಾರ್ ನಾಗರಾಜ್ ನಾಯ್ಕಡ ಅವರನ್ನು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಸದಾಶಿವ ಶೇರ್ವೆಗಾರ್ ಅವರನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಸಾಂಸ್ಕೃತಿಕ ಸ್ಪರ್ಧೆಗಳ ಸಂಚಾಲಕರಾದ ಸುಚೇತಾ, ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಉಮೇಶ್, ಹೆಬ್ರಿ ಅಮೃತಾ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಅಮರೇಶ್ ಹೆಗ್ಡೆ, ಎಸ್.ಆರ್.ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎಸ್.ಆರ್.ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ದೀಪಕ್ ಎನ್ ಕಾರ್ಯಕ್ರಮ ನಿರೂಪಿಸಿ, ರಸಾಯನಶಾಸ್ತ್ರ ಉಪನ್ಯಾಸಕರಾದ ಹರಿಪ್ರಸಾದ್ ಸ್ವಾಗತಿಸಿ,ಗಣಿತ ಉಪನ್ಯಾಸಕಿ ಪವಿತ್ರಾ ವಂದಿಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.