


ನವದೆಹಲಿ:** ಹಬ್ಬದ ಸಂದರ್ಭದಲ್ಲಿ ಆಹಾರ ಕಲಬೆರಕೆಗೆ ಕಡಿವಾಣ ಹಾಕಲು ಅಗತ್ಯ ಕ್ರಮ ಕೈಗೊಳ್ಳುವಂತೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ.
ಹಬ್ಬದ ವೇಳೆ ಸಿಹಿತಿಂಡಿ, ಹಾಲಿನ ಉತ್ಪನ್ನಗಳು, ಪಾನೀಯಗಳು, ಖಾದ್ಯ ತೈಲ ಸೇರಿದಂತೆ ವಿವಿಧ ಆಹಾರ ಉತ್ಪನ್ನಗಳ ಗುಣಮಟ್ಟದ ಮೇಲೆ ವಿಶೇಷ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಈ ಅವಧಿಯಲ್ಲಿ ಆಹಾರ ತಪಾಸಣೆ ಕಾರ್ಯವನ್ನು ಹೆಚ್ಚಿಸುವುದು, ಹೆಚ್ಚಿನ ಪ್ರಮಾಣದಲ್ಲಿ ಆಹಾರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸುವಂತೆ ರಾಜ್ಯಗಳ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಅಲ್ಲದೆ, ‘ಫುಡ್ ಸೇಫ್ಟಿ ಆನ್ ವೀಲ್ಸ್’ ವಾಹನಗಳ ನಿಯೋಜನೆ ಹೆಚ್ಚಿಸಿ, ಸ್ಥಳದಲ್ಲೇ ಆಹಾರ ಉತ್ಪನ್ನಗಳ ಪರೀಕ್ಷೆ ನಡೆಸುವಂತೆ FSSAI ಸೂಚಿಸಿದೆ.
ಆಹಾರ ಕಲಬೆರಕೆಯಿಂದ ಉಂಟಾಗುವ ಅಪಾಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಬ್ಬದ ಸಂದರ್ಭದಲ್ಲಿ ಸುರಕ್ಷಿತ ಹಾಗೂ ಗುಣಮಟ್ಟದ ಆಹಾರ ಲಭ್ಯವಾಗುವಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಾಧಿಕಾರ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.