



ಉಡುಪಿ, ಡಿ. 17: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಡಿಸೆಂಬರ್ 29 ರಿಂದ 31 ರ ವರೆಗೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ನಡೆಯಲಿದೆ.
ಜಿಲ್ಲಾ ಮಟ್ಟದ ಯುವ ಜನೋತ್ಸವದಲ್ಲಿ ವೈಯಕ್ತಿಕ ಹಾಗೂ ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿದ್ದು, ಸ್ಪರ್ಧಿಗಳು ಡಿ. 29 ರ ಬೆಳಗ್ಗೆ 10 ಗಂಟೆಯೊಳಗಾಗಿ ಪ್ರವೇಶ ಅರ್ಜಿಯೊಂದಿಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2521324, ಮೊ.ನಂ: 9480886467 ಅನ್ನು ಸಂಪರ್ಕಿಸುವoತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.