



ಪೆರ್ವಾಜೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಕಾರ್ಯಕ್ರಮ
ಕಾರ್ಕಳ : ಇತ್ತೀಚೆಗೆ ಇಹಲೋಹ ತ್ಯಜಿಸಿದ ಕನ್ನಡ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಹಾಗೂ ಕಾರ್ಕಳ ಪುರಸಭಾ ಮಾಜಿ ಅಧ್ಯಕ್ಷ ಪ್ರದೀಪ್ ಕೋಟ್ಯಾನ್ ಅವರಿಗೆ ಡಿ. 5ರ ಶನಿವಾರ ಸಂಜೆ 4 ಗಂಟೆಗೆ ಪೆರ್ವಾಜೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನುಡಿನಮನ ಕಾರ್ಯಕ್ರಮ ನಡೆಯಲಿದೆ. ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಡಿ.ಆರ್. ರಾಜು ಅಧ್ಯಕ್ಷತೆ ವಹಿಸಲಿದ್ದು, ಸಚಿವ ವಿ. ಸುನಿಲ್ ಕುಮಾರ್, ಖ್ಯಾತ ರಂಗಭೂಮಿ ಕಲಾವಿದ ಭೋಜರಾಜ್ ವಾಮಂಜೂರು, ಪುರಸಭಾ ಅಧ್ಯಕ್ಷೆ ಸುಮಾ ಕೇಶವ್, ಕರ್ನಾಟಕ ರಾಜ್ಯ ಗೇರು ನಿಗಮ ನಿ. ಅಧ್ಯಕ್ಷ ಮಣಿರಾಜ್ ಶೆಟ್ಟಿ, ಕಾರ್ಕಳ ಡಿವೈಎಸ್‌ಪಿ ವಿಜಯ್ ಪ್ರಸಾದ್, ಕರ್ನಾಟಕ ಕ್ವಾರಿ & ಸ್ಟೊನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರೋಹಿತ್ ಕುಮಾರ್ ಕಟೀಲ್ ಭಾಗವಹಿಸಲಿರುವರು ಎಂದು ಸ್ಮರಣಾಂಜಲಿ ಕಾರ್ಯಕ್ರಮ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.