



ಮಂಗಳೂರು ನಗರದ ಸುಲ್ತಾನ್ ಜ್ಯುವೆಲರಿ ಮತ್ತು ಹೋಳಿ ಆಚರಣೆಯ ಸಂದರ್ಭ ನೈತಿಕ ಪೊಲೀಸ್ಗಿರಿಯಲ್ಲಿ ಭಾಗಿಯಾಗಿದ್ದ ಬಜರಂಗದಳದ ಮೂವರನ್ನು ಗಡಿಪಾರು ಮಾಡಲು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮಂಗಳೂರು ನಗರದ ಸುಲ್ತಾನ್ ಜ್ಯುವೆಲರಿ ಹಾಗೂ ಹೋಳಿ ಆಚರಣೆ ವೇಳೆ ನಡೆದ ನೈತಿಕ ಪೊಲೀಸ್ಗಿರಿಯಲ್ಲಿ ಭಾಗಿಯಾಗಿದ್ದ ಬಜರಂಗದಳದ ಮೂವರನ್ನು ಗಡಿಪಾರು ಮಾಡಲು ತೀರ್ಮಾನ ಕೈಗೊಂಡಿದೆ.
ಈ ನಿಟ್ಟಿನಲ್ಲಿ ಬಜರಂಗದಳದ ಮೂವರಿಗೆ ಯಾಕೆ ಗಡಿಪಾರು ಮಾಡಬಾರದು? ಎಂದು ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ. ಇಂದು ಜುಲೈ 21ರಂದು ಮೂವರು ಬಜರಂಗದಳ ಕಾರ್ಯಕರ್ತರಿಗೆ ಕಾನೂನು ಸುವ್ಯವಸ್ಥೆ ಖಾತ್ರಿ ಪಡಿಸಲು ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದ್ದು, ಆ ಬಳಿಕ ಅಧಿಕೃತವಾಗಿ ಒಂದು ವರ್ಷದವರೆಗೆ ಗಡಿಪಾರು ಮಾಡುವ ಸಂಭವವಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್ಗಳಿಂದ ಗಡಿಪಾರಿಗೆ ವರದಿಯನ್ನು ಕೇಳಲಾಗಿದೆ ಎಂದು ತಿಳಿದುಬಂದಿದೆ.
ನೈತಿಕ ಪೊಲೀಸ್ ಗಿರಿ ಸಂಬಂಧಿಸಿದಂತೆ ಮೂವರ ಮೇಲೆ ಠಾಣೆಯಿಂದ ಪ್ರಸ್ತಾವನೆ ಬಂದಿದ್ದು, ಅವರನ್ನ ಗಡಿಪಾರು ಮಾಡಲು ಠಾಣಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ನೋಟೀಸ್ ನೀಡಿದ್ದು, ಗಡಿಪಾರು ಪ್ರಕ್ರಿಯೆ ನಡೆಯಲಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ನಗರದಲ್ಲಿ ಮತ್ತೆ ಮತ್ತೆ ಕ್ರೈಂ ಸುದ್ದಿಯಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳುವ ಕಾರ್ಯ ನಡೆಯುತ್ತಿದೆ. ಅವರು ಕೇವಲ ಆರೋಪಿಗಳಷ್ಟೇ, ಅನೇಕ ಮಂದಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.