logo
WhatsApp Image 2026-04-02 at 14.46.04.jpeg
hindalco everlast.jpeg

ದಕ್ಷಿಣ ಕನ್ನಡ: ನಾಳೆ, ಜುಲೈ 25 ರಂದು ಶಾಲಾ ಕಾಲೇಜು ಸೇರಿ ಕಂಪ್ಲೀಟ್ ರಜೆ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
24 Jul 2023
post image

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಹಾಗಾಗಿ ನಾಳೆ (ಜು.25) ಕೂಡಾ ದ.ಕ. ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 24-07-2023 ರಿಂದ 25-07-2023 ರವರೆಗೆ, ರೆಡ್, ಅಲರ್ಟ್, ಘೋಷಣೆಯಾಗಿರುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಶಿಕ್ಷಣ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 25.07.2023 ರಂದು ರಜೆಯನ್ನು ಘೋಷಿಸಲಾಗಿದೆ.

ಹಾಗೆನೇ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ಈ ಕೆಳಗಿನ ತುರ್ತು ಕ್ರಮಗಳನ್ನು ನಿರ್ವಹಿಸಲು ಸೂಚಿಸಲಾಗಿದೆ.

ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

ಪ್ರವಾಸಿಗರು / ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ತುರ್ತು ಸೇವೆಗೆ ಟೋಲ್ ಫ್ರೀ ನಂಬರ್: 24*7(ಕಂಟ್ರೋಲ್ ರೂಂ)- 1077 ಅಥವಾ 0824

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.