



ಬೆಂಗಳೂರು: ಆಕಾಶದಲ್ಲಿ ಕಾಣಿಸಿಕೊಂಡಿರುವ ನಿಗೂಢ ನೆರಳೊಂದರ ಚಿತ್ರವನ್ನು ಬೆಂಗಳೂರಿನ ವ್ಯಕ್ತಿಯೊಬ್ಬರು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.
ವಸೀಮ್ ಎಂಬ ವ್ಯಕ್ತಿ ವಿಡಿಯೋವನ್ನು ಟ್ವೀಟ್ ಮಾಡಿದ್ದು, ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆ ಬಳಿ ನಿನ್ನೆ ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದೆ. ಬೇರೆ ಯಾರಾದರೂ ನೋಡಿದ್ದೀರಾ? ಇದು ಏನಾಗಿರಬಹುದು? ಕಟ್ಟಡದ ನೆರಳಾ? ಹಾಗಿದ್ದಲ್ಲಿ, ಇದರ ಹಿಂದಿನ ವಿಜ್ಞಾನ ಏನಿರಬಹುದು? ಎಂದು ಶೀರ್ಷಿಕೆ ನೀಡಿದ್ದಾರೆ.
ಆನೇಕರು ಇದು ಸ್ವರ್ಗದ ಬಾಗಿಲು ಎಂದು ಕಮೆಂಟ್ ಮಾಡುತ್ತಿದ್ದಾರೆ. ಮತ್ತೆ ಕೆಲವರು ಅಚ್ಚರಿ ಹೊರ ಹಾಕಿದ್ದಾರೆ. ಕೆಲವರು ಇದು ಯಾವುದೋ ಎತ್ತರದ ಕಟ್ಟಡದ ಲೈಟ್ನ ನೆರಳಿರಬಹುದು ಎಂದು ಊಹಿಸಿದರೆ ಇನ್ನೂ ಕೆಲವರು ಇದನ್ನು ‘ಬ್ರೋಕನ್ ಸ್ಪೆಕ್ಟರ್’ ಎಂದು ಊಹಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.