logo
WhatsApp Image 2026-04-02 at 14.46.04.jpeg
hindalco everlast.jpeg

ಕೆದೂರು ರೈಲ್ವೆಯ ಹಳಿಯ ಬಳಿ ತೋಡಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ಸಾವಿನಲ್ಲಿ ಶಂಕೆ

ಟ್ರೆಂಡಿಂಗ್
share whatsappshare facebookshare telegram
16 Jul 2022
post image

ಕುಂದಾಪುರ ತಾಲೂಕಿನ ಕೆದೂರು ಗ್ರಾಮದ  ರೈಲ್ವೆ ಹಳಿಯ ಪಶ್ಚಿಮ ಬದಿಯ ನೀರಿನ ತೋಡಿನಲ್ಲಿ ವ್ಯಕ್ತಿ ಮೃತದೇಹ ಪತ್ತೆಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ . ಮೃತರನ್ನು ನಿತ್ಯಾನಂದ ಶೇಟ್ ಎಂದು ಗುರುತಿಸಲಾಗಿದೆ. ಕೊಂಕಣ ರೈಲ್ವೆ ಸ್ಟೇಷನ್ ಕುಂದಾಪುರದಲ್ಲಿ ರೈಲ್ವೆ ಟ್ರ್ಯಾಕ್ ಮ್ಯಾನ್ ಆಗಿ  ಕೆಲಸ ಮಾಡಿಕೊಂಡಿರುವ ಪ್ರಶಾಂತ ನಾಯಕ್ ಎಂಬವರಿಗೆ ಮೃತದೇಹ ಪತ್ತೆಯಾಗಿರುವ ಬಗ್ಗೆ ಮಾಹಿತಿ ಬಂದಿತ್ತು. ಅದರಂತೆ ಸ್ಥಳಕ್ಕೆ ಹೋಗಿ ನೋಡಿದಾಗ ವ್ಯಕ್ತಿಯೊಬ್ಬರು ತಲೆಯ ಹಿಂಬದಿಗೆ ತೀವ್ರ ಗಾಯಗೊಂಡು ಮೃತಪಟ್ಟಿರುವುದು ಕಂಡುಬಂದಿದೆ. ವ್ಯಕ್ತಿಯು ರೈಲಿನಲ್ಲಿ ಪ್ರಯಾಣಿಸುವಾಗ ಆಕಸ್ಮಿಕವಾಗಿ ಬಿದ್ದು ಅಥವಾ ಇನ್ಯಾವುದೋ ಕಾರಣದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.. 

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.