logo
WhatsApp Image 2026-04-02 at 14.46.04.jpeg
hindalco everlast.jpeg

ಮೆಹಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಟ್ರೆಂಡಿಂಗ್
share whatsappshare facebookshare telegram
23 Jun 2022
post image

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಅಂಬಾಗಿಲಿನ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರು ನಿವಾಸಿ ಗಣಪತಿ ಆಚಾರ್ಯ (56) ಮೃತಪಟ್ಟ ವರು.ಜೂ.21 ರಾತ್ರಿ ನೆರೆಮನೆಯ ಸಂಬಂಧಿಕರ ಮೆಹೆಂದಿ ಕಾರ್ಯಕ್ರಮದಲ್ಲಿ ಇತರರೊಂದಿಗೆ ನೃತ್ಯ ಮಾಡುತ್ತಿದ್ದರು. ಈ ವೇಳೆ ಕುಸಿದು ಬಿದ್ದಿದ್ದು, ಕೂಡಲೇ ಇವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ತಲುಪುವಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.