logo
WhatsApp Image 2026-04-02 at 14.46.04.jpeg
hindalco everlast.jpeg

ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಸಚಿವ ಸುನಿಲ್ ಕುಮಾರ್ ಸಂತಾಪ *

ಟ್ರೆಂಡಿಂಗ್
share whatsappshare facebookshare telegram
13 Sept 2021
post image

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ನಿಧನಕ್ಕೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನ ಹಿರಿಯ ನಾಯಕ ,ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.

ಲೋಕಸಭಾ ಸದಸ್ಯರಾಗಿ ರಾಜ್ಯ ಸಭಾ ಸದಸ್ಯರಾಗಿ ಅವರು ಸಲ್ಲಿಸಿದ ಸೇವೆ ಅನನ್ಯವಾದದ್ದು . ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಆಸ್ಕರ್ ಫರ್ನಾಂಡಿಸ್ ಉಡುಪಿಯಲ್ಲಿ ಹುಟ್ಟಿ,ನಂತರ ರಾಷ್ಟ್ರ ಮಟ್ಟದ ನಾಯಕರಾಗಿ ಬೆಳೆದದ್ದು ಒಂದು ಸಾಹಸಗಾಥೆ. ಅವರ ನಿಧನದಿಂದ ರಾಜ್ಯ ಮತ್ತು ರಾಷ್ಟ್ರ ಒಬ್ಬ ಅತ್ಯುತ್ತಮ ಜನನಾಯಕ ನನ್ನ ಕಳೆದುಕೊಂಡಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕೊಡಲಿ. ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಚಿವ ಸುನಿಲ್ ಕುಮಾರ್ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.