logo
WhatsApp Image 2026-04-02 at 14.46.04.jpeg
hindalco everlast.jpeg

ಮುಳ್ಳು ಹಂದಿ ಹಿಡಿಯಲು ಗುಹೆ ಪ್ರವೇಶ ಮಾಡಿದ್ದ ಇಬ್ಬರು ಯುವಕರ ಮೃತ್ಯು

ರಾಜ್ಯ
share whatsappshare facebookshare telegram
28 Feb 2023
post image

ಚಿಕ್ಕಮಗಳೂರು: ಮುಳ್ಳು ಹಂದಿ ಹಿಡಿಯುವ ದುಸ್ಸಾಹಸ ಮಾಡಿದ ನಾಲ್ವರು ಯುವಕರ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಆನೆಗುಂದಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.

ಮೃತಪಟ್ಟವರನ್ನು ಗೋವಿಂದ ರಾಜು ಮತ್ತು ವಿಜಯ ಕುಮಾರ್ ಎಂದು ಗುರುತಿಸಲಾಗಿದೆ. ಇಬ್ಬರೂ ತಮಿಳುನಾಡು ಮೂಲದವರಾಗಿದ್ದಾರೆ.

ಮುಳ್ಳು ಹಂದಿ ಹಿಡಿಯಲು ನಾಲ್ಕು ಮಂದಿ ಗುಹೆಗೆ ಪ್ರವೇಶ ಮಾಡಿದ್ದರು. ಅವರಲ್ಲಿ ಇಬ್ಬರು ಸುರಕ್ಷಿತರಾಗಿ ಹೊರ ಬಂದಿದ್ದಾರೆ. ಉಳಿದ ಇಬ್ಬರು ಮೃತಪಟ್ಟಿದ್ದಾರೆ. ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಬಾಳೂರು ಠಾಣೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.