



ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಡಿ. 24 ರಂದು ಸಂಜೆ 6 ಗಂಟೆಗೆ ಅಮೃತ ವೈಭವ – ಹೊನಲು ಬೆಳಕಿನ ಸಾಂಸ್ಕೃತಿಕ ಉತ್ಸವ ನಡೆಯಲಿದೆ.
ಅಮೃತ ಭಾರತಿ ಟ್ರಸ್ಟ್ ಅಧ್ಯಕ್ಷ ಸಿಎ ಎಂ. ರವಿರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಸಭಾ ಸದಸ್ಯ ಲೆಹರ್ ಸಿಂಗ್, ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ದ.ಕ. ಸಂಸದ ನಳಿನ್ ಕುಮಾರ್ ಕಟಿಲ್, ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ., ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಮುಂಬೈ ಉದ್ಯಮಿ ಯದುನಾರಾಯಣ ಶೆಟ್ಟಿ, ನಿವೃತ್ತ ಲೆಕ್ಕಪರಿಶೋಧಕ ಕಮಲಾಕ್ಷ ಕಾಮತ್ ಉಪಸ್ಥಿತಿರುವರು.
ಅಮೃತ ವೈಭವದಲ್ಲಿ ಸಂಚಲನ, ಘೋಷ್, ಶಿಶುನೃತ್ಯ, ಸಾಮೂಹಿಕ ವ್ಯಾಯಾಮ, ಏಕಚಕ್ರ-ದ್ವಿಚಕ್ರ ಸಮತೋಲನ, ಪಿರಮಿಡ್, ಕುಣಿತ ಭಜನೆ, ಮಲ್ಲಕಂಬ, ರಚನೆ, ಜಡೆ ಕೋಲಾಟ, ಬೆಂಕಿ ಸಾಹಸ, ಜನಪದ ನೃತ್ಯ ವೈವಿಧ್ಯ, ಯೋಗಾಸನ, ನೃತ್ಯ ರೂಪಕ ಇರಲಿದೆ ಎಂದು ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.