



ಬೆಂಗಳೂರು : ಹೈಕೋರ್ಟ್ ಆದೇಶದಂತೆ ತಂದೆಯ ಆದಾಯ ಪ್ರಮಾಣ ಪತ್ರ ನೀಡಿರುವ ಅಭ್ಯರ್ಥಿಗಳನ್ನೂ ಪರಿಗಣಿಸಿ ಇನ್ನೊಂದು ವಾರದಲ್ಲಿ 15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿವಾಹಿತ ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಭ್ಯರ್ಥಿಗಳ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್ , ವಿವಾಹಿತ ಮಹಿಳೆಯರು ಸಲ್ಲಿಸಿರುವ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ಮುಂದುವರೆಸುವಂತೆ ಆದೇಶದಲ್ಲಿ ತಿಳಿಸಿತ್ತು. ಈ ಕುರಿತು ಮುಖ್ಯ ಕಾರ್ಯದರ್ಶಿಯವರು, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿಪರಿಷ್ಕರಿಸಲು ತೀರ್ಮಾನಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದ ಆರಂಭದ ವೇಳೆಗೆ ಹೊಸ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.