



ನವದೆಹಲಿ: ಹೋಟೆಲ್, ರೆಸ್ಟೋರೆಂಟ್ ಹಾಗೂ ಉದ್ದಿಮೆಗಳಲ್ಲಿ ಬಳಸುವ ವಾಣಿಜ್ಯ ಉದ್ದೇಶದ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಮಂಗಳವಾರ ₹91.50 ಇಳಿಕೆಯಾಗಿದೆ. ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ರಾಷ್ಟ್ರೀಯ ತೈಲ ಮಾರಾಟ ಕಂಪನಿಗಳು ಬೆಲೆ ಇಳಿಕೆ ನಿರ್ಧಾರ ಕೈಗೊಂಡಿವೆ ಎನ್ನಲಾಗಿದ್ದು, ಇಂದಿನಿಂದಲೇ ಹೊಸ ದರ (ಫೆಬ್ರುವರಿ 1) ಜಾರಿಗೆ ಬರುವ ಸಾಧ್ಯತೆಗಳಿವೆ.
ಈ ತೀರ್ಮಾನದಿಂದ ದೆಹಲಿಯಲ್ಲಿ ವಾಣಿಜ್ಯ ಉದ್ದೇಶಕ್ಕೆ ಬಳಸುವ 19 ಕೆ.ಜಿ ಎಲ್‌ಪಿಜಿ ಸಿಲಿಂಡರ್ ದರ ₹1907 ಆಗಲಿದೆ. ಮುಂಬೈನಲ್ಲಿ ವಾಣಿಜ್ಯ ಅನಿಲದ ಬೆಲೆ 1857 ರೂ ಗೆ ಏರಿದೆ. ಚೆನ್ನೈನಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2080.5 ರೂ ಗೆ ಏರಿದೆ. ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್ ಬೆಲೆ 899.50 ರೂ. ಕೋಲ್ಕತ್ತಾದಲ್ಲಿ LPG ಸಿಲಿಂಡರ್ ಬೆಲೆ 926 ರೂ., ಮುಂಬೈನಲ್ಲಿ 899.50 ರೂ. ಇನ್ನು ಚೆನ್ನೈನಲ್ಲಿ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 915.50 ರೂ. ಇದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.