



ಹೆಬ್ರಿ : ಡೀಮ್ಡ್ ಫಾರೆಸ್ಟ್ ಸಮಸ್ಯೆಯಾಗದಂತೆ ೬ ಲಕ್ಷ ಹೆಕ್ಟೇರ್ ಜಮೀನನ್ನು ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಕೈಬಿಟ್ಟು ಅರಣ್ಯ ಪ್ರದೇಶದಲ್ಲಿ ಬದುಕುತ್ತಿರುವ ಕುಟುಂಬಗಳಿಗೆ ಜಮೀನು ಹಂಚಿಕೆ ಮಾಡುವಂತೆ ಅಂದಿನ ನಮ್ಮ ಸರ್ಕಾರ ಸಮಿತಿ ಮಾಡಿ ಸುಪ್ರೀಂ ಕೋರ್ಟಿಗೆ ಮನವಿ ಮಾಡಲಾಗಿತ್ತು. ಆದರೆ ಈಗಿನ ಸರ್ಕಾರ ಮುತುವರ್ಜಿ ವಹಿಸದೇ ಜನರಿಗೆ ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗೆಹರಿಯದೇ ಉಳಿದಿದೆ. ಬಿಜೆಪಿ ಸರ್ಕಾರದ ಜನರ ಬದುಕಿನ ಜೊತೆಗೆ ಆಟ ಆಡುತ್ತಿದೆ ಆಡುತ್ತಿದೆ ಎಂದು ಮಾಜಿ ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಸೋಮವಾರ ಮುದ್ರಾಡಿ ಮತ್ತು ಬಚ್ಚಪ್ಪಿಗೆ ಬೇಟಿ ನೀಡಿ ಮಾತನಾಡಿದರು. ಮುದ್ರಾಡಿ ಶ್ರೀಗುರುರಕ್ಷಾ ಸೌಹಾರ್ಧ ಸಹಕಾರಕ್ಕೆ ಬೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಎಚ್.ಜನಾರ್ಧನ್, ಹೆಚ್.ಬಿ.ಸುರೇಶ್, ಸಂತೋಷ ನಾಯಕ್, ಯುವ ಕಾಂಗ್ರೆಸ್ ಅಧ್ಯಕ್ಷ ದಿನೇಶ ಶೆಟ್ಟಿ, ಸ್ಥಳೀಯ ಪ್ರಮುಖರು ಭಾಗವಹಿಸಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.