



ಜಮ್ಮು-ಕಾಶ್ಮೀರ: ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಭಾರತೀಯ ಭದ್ರತಾ ಪಡೆಯು ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಶುಕ್ರವಾರ ಹತ್ಯೆ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಶ್ಮೀರ ವಲಯ ಪೊಲೀಸರು, ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಪಿಒಕೆಯಿಂದ ನಮ್ಮ ಕಡೆಗೆ ನುಸುಳಲು ಪ್ರಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಕುಪ್ವಾರದ ಮಚ್ಚಲ್ ಸೆಕ್ಟರ್‌ನ ಕಾಲಾ ಜಂಗಲ್‌ನಲ್ಲಿ ಸದೆಬಡಿಯಲಾಗಿದೆ ಎಂದು ತಿಳಿಸಿದ್ದಾರೆ.
ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಗೆ ಸಮೀಪವಿರುವ ಜಮ್‌ಗುಂಡ್ ಕೆರಾನ್‌ನಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯಲ್ಲಿ ತಡೆಗಟ್ಟಿದ ವಾರದ ಬಳಿಕ ನಾಲ್ವರು ಭಯೋತ್ಪಾದಕರ ಹತ್ಯೆ ನಡೆದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.