



ನವದೆಹಲಿ: ಗುಂಡು ಹಾರಿಸಿ ಇಬ್ಬರು ಮಹಿಳೆಯರನ್ನು ಹತ್ಯೆ ಮಾಡಿರುವ ಘಟನೆ ಇಂದು ಮುಂಜಾನೆ ನವದೆಹಲಿಯಲ್ಲಿ ನಡೆದಿದ್ದು, ಪ್ರಕರಣದ ಪ್ರಮುಖ ಆರೋಪಿ ಮತ್ತು ಆತನ ಸಹಚರನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮೃತಪಟ್ಟವರನ್ನು ಪಿಂಕಿ (30) ಮತ್ತು ಜ್ಯೋತಿ (29) ಎಂದು ಗುರುತಿಸಲಾಗಿದೆ. ನವದೆಹಲಿಯ ಡಾ. ಅಂಬೇಡ್ಕರ್ ಬಸ್ತಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಭಾನುವಾರ ಮುಂಜಾನೆ 4.40ರ ಸುಮಾರಿಗೆ ಈ ಘಟನೆ ನಡೆದಿದೆ. ಗುಂಡಿನ ದಾಳಿ ಬಳಿಕ ಸ್ಥಳೀಯರು ಇಬ್ಬರನ್ನು ಸಫ್ಧರ್ ಜಂಗ್ ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕೊಲೆಯಾದ ಇಬ್ಬರು ಮಹಿಳೆಯರು ಸಹೋದರನ ಜೊತೆ ಹಣಕಾಸಿನ ವಿಚಾರಕ್ಕೆ ಜಗಳವಾಡಿದ್ದರು ಎಂಬ ಪ್ರಾಥಮಿಕ ಮಾಹಿತಿ ಸಿಕ್ಕಿದೆ. ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.