



ದೆಹಲಿ: ಕೋರ್ಟಿನ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ದೆಹಲಿಯ ಸಾಕೇತ್ ಜಿಲ್ಲಾ ನ್ಯಾಯಾಲಯದಲ್ಲಿ ಏ.21 ರಂದು ನಡೆದಿದೆ. ದೆಹಲಿಯ ಸಾಕೇತ್ ಜಿಲ್ಲಾ ಕೋರ್ಟಿನ ಆವರಣದಲ್ಲಿ ವಕೀಲರ ಧಿರಿಸಿನಲ್ಲಿ ಬಂದ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾನೆ. ಗಂಭೀರ ಸ್ಥಿತಿಯಲ್ಲಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಹಣಕಾಸಿನ ವಿವಾದಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆಗಾಗಿ ಮಹಿಳೆ ನ್ಯಾಯಾಲಯಕ್ಕೆ ಬಂದಾಗ ವ್ಯಕ್ತಿಯೊಬ್ಬ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುಂಡಿನ ದಾಳಿಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮೂಲಗಳ ಪ್ರಕಾರ, ಆರೋಪಿ ಕ್ರಿಮಿನಲ್ ಹಿನ್ನೆಲೆವುಳ್ಳವನಾಗಿದ್ದಾನೆ ಎನ್ನಲಾಗಿದೆ. ಸದ್ಯ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.