logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಪಿ.ಎಂ ವಿಶ್ವಕರ್ಮ ಯೋಜನೆಯನ್ನು ಅರ್ಹ ಕುಶಲಕರ್ಮಿಗಳಿಗೆ ತಲುಪಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಟ್ರೆಂಡಿಂಗ್
share whatsappshare facebookshare telegram
14 Dec 2023
post image

ಉಡುಪಿ: ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕರ ಕುಶಲ ಕಲೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಪ್ರೋತ್ಸಾಹಿಸಲು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಸರಕಾರ ಕುಶಲಕರ್ಮಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವುದರ ಜೊತೆಗೆ ಅವರುಗಳಿಗೆ ಆರ್ಥಿಕ ಸೌಲಭ್ಯಗಳನ್ನು ಕಲ್ಪಿಸಿ, ಸ್ವಾವಲಂಭಿ ಜೀವನ ನಡೆಸುವುದರೊಂದಿಗೆ ಆರ್ಥಿಕರಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವುದರೊಂದಿಗೆ ಅರ್ಹ ಫಲಾನುಭವಿಗಳು ಯೋಜನೆಯ ಲಾಭ ಪಡೆದುಕೊಳ್ಳುವಂತೆ ಕ್ರಮವಹಿಸಬೇಕು ಎಂದರು. ಈ ಯೋಜನೆ ಕುಶಲಕರ್ಮಿಗಳಿಗೆ ಸಹಾಯ ಆಧಾರಿತ ಯೋಜನೆಯಾಗಿದ್ದು, ವಿವಿಧ ವೃತ್ತಿಯಲ್ಲಿ ತೊಡಗಿಸುವ ಕುಶಲಕರ್ಮಿಗಳಿಗೆ ಸೌಲಭ್ಯ ಕಲ್ಪಿಸುವ ಉದ್ದೇಶವಾಗಿದೆ. ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ನೋಂದಣಿ ಮತ್ತು ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕೃತ ಪಿ.ಎಂ ವಿಶ್ವಕರ್ಮ ಪೋರ್ಟಲ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದರು.

ಸ್ಥಳೀಯ ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಸಾಂಪ್ರದಾಯಿಕವಾಗಿ ಕುಶಲ ಕರ್ಮಿಗಳ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಕುಟುಂಬದ ಸದಸ್ಯರು ಸರ್ಕಾರಿ ಸೇವೆಯಲ್ಲಿ ಇಲ್ಲದೇ ಇರುವ ಕುಟುಂಬದ ಏಕ ಮಾತ್ರ ಸದಸ್ಯರಿಗೆ ಶಿಫಾರಸ್ಸು ಮಾಡಬಹುದಾಗಿದೆ ಎಂದರು. ಬಡಗಿತನ, ಮರಗೆಲಸ, ದೋಣಿ ತಯಾರಿಕೆ, ಸುತ್ತಿಗೆ ನತ್ತು ಉಪಕರಣಗಳನ್ನು ತಯಾರಿಸುವವರು ಬೀಗ ತಯಾರಕರು, ನೇಕಾರರು, ಕುಂಬಾರಿಕೆ, ಪಾದರಕ್ಷೆ ತಯಾರಿಕೆ, ಚರ್ಮಗಾರಿಕೆ, ಅಕ್ಕಸಾಲಿಗರು, ಕಮ್ಮಾರರು, ಬಡಗಿ, ಅಗಸರು, ಟೈಲರ್, ಶಿಲ್ಪ ರಚನಾಕಾರರು, ಚಮ್ಮಾರ, ಮೇಸ್ತಿç, ಗೊಂಬೆ, ಆಟಿಕೆ ತಯಾರಕರು, ಬುಟ್ಟಿ ತಯಾರಿಸುವವರು, ದೋಬಿಗಳು, ಕ್ಷೌರಿಕರು, ಮೀನುಗಾರಿಕೆ ಬಲೆ ಹೆಣೆಯುವವರು, ಹೂವಿನ ಮಾಲೆ ತಯಾರಕರು ಸೇರಿದಂತೆ ಮತ್ತಿತರರು ಈ ಯೋಜನೆಯಡಿ ಲಾಭ ಪಡೆದುಕೊಳ್ಳಬಹುದಾಗಿದೆ ಎಂದರು.

ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ಸಾಮಾನ್ಯ ಸೇವಾ ಕೇಂದ್ರದಲ್ಲಿ ತ್ವರಿತವಾಗಿ ಯೋಜನೆಗೆ ನೋಂದಣಿ ಮಾಡಬಹುದಾಗಿದೆ. ಆಯ್ಕೆಯಾದ ಫಲಾನುಭವಿಗಳಿಗೆ ಡಿಜಿಟಲ್ ಐ.ಡಿ ಕಾರ್ಡ ಹಾಗೂ ಪಿ.ಎಂ ವಿಶ್ವ ಕರ್ಮ ಪ್ರಮಾಣ ಪತ್ರವನ್ನು ನೀಡುವುದರ ಜೊತೆಗೆ ಮೂಲಭೂತ ಕೌಶಲ್ಯ ತರಬೇತಿ ಹಾಗೂ ಉಪಕರಣಗಳನ್ನು ನೀಡುವುದರ ಜೊತೆಗೆ ಶೇ. 5 ರ ಬಡ್ಡಿ ದರದಲ್ಲಿ ಒಂದು ಲಕ್ಷ ರೂ. ವರೆಗೆ ಸಾಲ ಸೌಲಭ್ಯ ಒದಗಿಸಲಾಗುವುದು ಎಂದರು. ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ವಿ. ನಾಯಕ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅರುಣ್, ಎಂ.ಎಸ್.ಎಂ.ಇ ಅಧಿಕಾರಿ ಸುಂದರ್ ಶೇರಿಗಾರ್, ಸಾಮಾನ್ಯ ಸೌಲಭ್ಯ ಕೇಂದ್ರದ ಜಿಲ್ಲಾ ವ್ಯವಸ್ಥಾಪಕ ಗೋವರ್ಧನ್, ಎಸ್.ಕೆ.ಡಿ.ಆರ್.ಡಿ.ಪಿ ಜಿಲ್ಲಾ ನೋಡಲ್ ಅಧಿಕಾರಿ ಪ್ರಸನ್ನ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.