logo
WhatsApp Image 2026-04-02 at 14.46.04.jpeg
hindalco everlast.jpeg

ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠಕ್ಕೆ ಆಗ್ರಹ: ರಾಜ್ಯಸಭಾ ಸಂಸದ ಡಾ. ಎಂ. ನಾಗರಾಜ್ ಅವರಿಗೆ 'ಯೂ-ಆಕ್ಟ್' ಹಾಗೂ 'ಹೈಕೋರ್ಟ್ ಪೀಠ ಹೋರಾಟ ಸಮಿತಿ'ಯಿಂದ ಉಡುಪಿಯಲ್ಲಿ ಮನವಿ

ಟ್ರೆಂಡಿಂಗ್
share whatsappshare facebookshare telegram
26 Aug 2026
post image

ಉಡುಪಿ: ಕರಾವಳಿ ಕರ್ನಾಟಕ ಭಾಗಕ್ಕೆ (ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳು) ಕರ್ನಾಟಕ ಉಚ್ಚ ನ್ಯಾಯಾಲಯದ ಸಂಚಾರಿ ಪೀಠವನ್ನು (Circuit Bench) ತಕ್ಷಣವೇ ಮಂಜೂರು ಮಾಡಬೇಕೆಂದು ಆಗ್ರಹಿಸಿ, ಉಡುಪಿಗೆ ಇಂದು ಭೇಟಿ ನೀಡಿದ್ದ ಮಾನ್ಯ ರಾಜ್ಯಸಭಾ ಸಂಸದರಾದ ಡಾ. ಎಂ. ನಾಗರಾಜ್ ಅವರಿಗೆ ಯೂ-ಆಕ್ಟ್ (U-ACT) ಹಾಗೂ ಕರಾವಳಿ ಕರ್ನಾಟಕ ಹೈಕೋರ್ಟ್ ಪೀಠ ಹೋರಾಟ ಸಮಿತಿ (ಉಡುಪಿ ಜಿಲ್ಲೆ) ವತಿಯಿಂದ ಅಧಿಕೃತ ಮನವಿ ಪತ್ರವನ್ನು ಸಲ್ಲಿಸಲಾಯಿತು. ​ಮನವಿ ಪತ್ರವನ್ನು ಹಸ್ತಾಂತರಿಸಿ ಮಾತನಾಡಿದ ಯೂ-ಆಕ್ಟ್ ಸಂಸ್ಥಾಪಕರು ಹಾಗೂ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕರಾದ ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ ಅವರು, ಕರಾವಳಿ ಭಾಗದ ಜನಸಾಮಾನ್ಯರು, ಕಕ್ಷಿದಾರರು ಹಾಗೂ ವಕೀಲರು ನ್ಯಾಯಕ್ಕಾಗಿ 400-450 ಕ್ಕೂ ಹೆಚ್ಚು ಕಿಲೋಮೀಟರ್ ದೂರದ ಬೆಂಗಳೂರಿಗೆ ಪ್ರಯಾಣಿಸಬೇಕಾದ ಅನಿವಾರ್ಯತೆಯಿದೆ. ವಿಶೇಷವಾಗಿ ಮಳೆಗಾಲದಲ್ಲಿ ಘಾಟಿ ಮಾರ್ಗಗಳ ಸಂಚಾರ ಕಷ್ಟಕರವಾಗಿದ್ದು, ಕಾಲಮಿತಿಯಲ್ಲಿ ಮತ್ತು ಕೈಗೆಟುಕುವ ವೆಚ್ಚದಲ್ಲಿ ನ್ಯಾಯ ಸಿಗಲು ಕರಾವಳಿಯಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗುವುದು ಅತ್ಯಗತ್ಯ ಎಂದರು.

​ಇದೇ ಆಗಸ್ಟ್ 22 ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ರವೀಂದ್ರ ಮಂಟಪದಲ್ಲಿ ಜಿಲ್ಲೆಯ ಎಲ್ಲಾ 5 ವಕೀಲರ ಸಂಘಗಳು (Bar Associations) ಹಾಗೂ ವಿವಿಧ ಸಾಮಾಜಿಕ, ಶೈಕ್ಷಣಿಕ, ರೈತ, ಮಹಿಳಾ, ವಿದ್ಯಾರ್ಥಿ ಮತ್ತು ವಾಣಿಜ್ಯ ಸಂಘಟನೆಗಳ ಒಕ್ಕೂಟದೊಂದಿಗೆ ನಡೆದ ಬೃಹತ್ ಜಿಲ್ಲಾ ಮಟ್ಟದ ಸಮಾಲೋಚನಾ ಸಭೆಯಲ್ಲಿ ಕೈಗೊಂಡ ಒಮ್ಮತದ ತೀರ್ಮಾನಗಳನ್ನು ಸಂಸದರ ಗಮನಕ್ಕೆ ತರಲಾಯಿತು.

​ಮನವಿಯಲ್ಲಿನ ಪ್ರಮುಖ ಬೇಡಿಕೆಗಳು: ​ಕರಾವಳಿ ಭಾಗಕ್ಕೆ ಸಂಚಾರಿ ಪೀಠವನ್ನು ಮಂಜೂರು ಮಾಡುವ ಪ್ರಕ್ರಿಯೆಗೆ ಕರ್ನಾಟಕ ಉಚ್ಚ ನ್ಯಾಯಾಲಯದ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಶೀಘ್ರ ಕ್ರಮ ಕೈಗೊಳ್ಳಬೇಕು. ​ಕರ್ನಾಟಕ ಸರ್ಕಾರವು ಅಗತ್ಯ ಮೂಲಸೌಕರ್ಯ, ಜಾಗ ಮತ್ತು ಆಯವ್ಯಯದ (ಬಜೆಟ್) ಬೆಂಬಲವನ್ನು ಒದಗಿಸಬೇಕು. ​ಕೇಂದ್ರ ಸರ್ಕಾರ ಹಾಗೂ ಕೇಂದ್ರ ಕಾನೂನು ಸಚಿವಾಲಯವು ಅಗತ್ಯವಿರುವ ಶಾಸನಬದ್ಧ ಮತ್ತು ಆಡಳಿತಾತ್ಮಕ ಅನುಮೋದನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ​ಮನವಿ ಸ್ವೀಕರಿಸಿ ಮಾತನಾಡಿದ ಸಂಸದ ಡಾ. ಎಂ. ನಾಗರಾಜ್ ಅವರು, ಕರಾವಳಿ ಜನರ ಈ ಸುದೀರ್ಘ ಹಾಗೂ ನ್ಯಾಯಯುತ ಬೇಡಿಕೆಯ ಕುರಿತು ಧನಾತ್ಮಕವಾಗಿ ಸ್ಪಂದಿಸಿದ್ದು, ಈ ವಿಷಯವನ್ನು ಕೇಂದ್ರ ಕಾನೂನು ಸಚಿವಾಲಯ, ರಾಜ್ಯದ ಮುಖ್ಯಮಂತ್ರಿಗಳು ಹಾಗೂ ನ್ಯಾಯಾಂಗದ ಉನ್ನತ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳಲು ಶ್ರಮಿಸುವುದಾಗಿ ಭರವಸೆ ನೀಡಿದರು.

​ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ವಿಜಯ್ ಡಿಸೋಜ, ಸುರೇಶ ಕಾಮತ್, ಶ್ರೀಮತಿ ಪೌರ್ಣಮಿ ಪ್ರೇಮ್, ಕು.ಸರಿತಾ ಹಾಗೂ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.