



ಬಂಟ್ವಾಳ: ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದ್ದು, ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕೆಂದು ಪುರಸಭೆಯ ಮುಖ್ಯ ಅಧಿಕಾರಿಯವರು ತಿಳಿಸಿದ್ದಾರೆ. ಮನೆಯ ಸುತ್ತಮುತ್ತ ಚಿಪ್ಪು, ಗಿರಟೆ, ಟೈಯರ್ ಮುಂತಾದ ವಸ್ತುಗಳಲ್ಲಿ ಹಾಗೂ ಮನೆಯ ಸುತ್ತ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ತಿಳಿಸಿದ್ದಾರೆ.
ಇನ್ನು ಜ್ವರ, ವಾಂತಿ, ವಾಕರಿಕೆ, ತೀವ್ರ ಮೈ-ಕೈ ನೋವು, ತಲೆ ನೋವು ಕಂಡುಬಂದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಔಷಧ ಪಡೆದುಕೊಳ್ಳಬೇಕು. ಡೆಂಗ್ಯೂ ಜ್ವರದ ಪ್ರಕರಣಗಳು ಪತ್ತೆಯಾದ ಪರಿಸರದಲ್ಲಿ ಸಾರ್ವಜನಿಕರು ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟು ರೋಗಗಳು ಹರಡದಂತೆ ನಿಯಂತ್ರಿಸಲು ಅಗತ್ಯ ಸಹಕಾರವನ್ನು ನೀಡಬೇಕು ಎಂದು ಬಂಟ್ವಾಳ ಪುರಸಭೆಯ ಮುಖ್ಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.