



ಕಾರ್ಕಳ: ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ನೀರು ನಿಲ್ಲದಂತೆ ನೋಡಿಕೊಳ್ಳುವುದು. ನಿಂತ ನೀರಿನಲ್ಲಿ ಈಡಿಸ್ ಸೊಳ್ಳೆ ಉತ್ಪತ್ತಿಯಾಗಿ ಅದು ಮನುಷ್ಯರಿಗೆ ಕಚ್ಚುವ ಮೂಲಕ ಡೆಂಗಿ ಹರಡುತ್ತದೆ. ಜ್ವರ ಬಂದಾಗ ಅದನ್ನು ನಿರ್ಲಕ್ಷಿಸದೆ ವೈದ್ಯರ ಬಳಿ ತೆರಳಿ ಪರೀಕ್ಷಿಸಿ ಸೂಕ್ತ ಔಷಧಿಯನ್ನು ತೆಗೆದುಕೊಳ್ಳಬೇಕು. ಸಮುದಾಯದ ಸಹಕಾರದಿಂದ ಡೆಂಗಿ ನಿಯಂತ್ರಣ ಸಾಧ್ಯ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರ ಹಿರ್ಗಾನದ ವೈದ್ಯಾಧಿಕಾರಿಯಾಗಿರುವ ಡಾಕ್ಟರ್ ಶಮ ರವರು ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳ ದಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ವತಿಯಿಂದ ಡೆಂಗಿ ಜ್ವರ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಸಂಸ್ಥಾಪಕರಲ್ಲಿ ಓರ್ವರಾದ ಶ್ರೀ ಗಣಪತಿ ಭಟ್ ರವರು ಡೆಂಗಿ ಮತ್ತು ಮಲೇರಿಯಾದಂತಹ ಜ್ವರಗಳನ್ನು ನಿರ್ಲಕ್ಷಿಸಿದ್ದಲ್ಲಿ ಅದು ಮಾರಣಾಂತಿಕ ಹಂತಕ್ಕೂ ತಲುಪಬಹುದು. ವಿದ್ಯಾರ್ಥಿಗಳು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಕುರಿತು ಮಾತುಗಳನ್ನಾಡಿದರು. ವೇದಿಕೆಯಲ್ಲಿ ಸ್ಥಳೀಯ ಸಮುದಾಯ ಆರೋಗ್ಯ ಅಧಿಕಾರಿಯಾದ ಶ್ರೀಮತಿ ವಿನುತಾ, ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀ ಅನುಬೆಳ್ಳೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ವಿಭಾಗದ ಉಪನ್ಯಾಸಕರಾದ ಶ್ರೀ ಸಂತೋಷ್ ನಿರೂಪಿಸಿ ವಂದಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.