



ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಪ್ರಸಕ್ತ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವು ಅಕ್ಟೋಬರ್ 1 ಮತ್ತು 2 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಪುರುಷರಿಗೆ ವಾಲಿಬಾಲ್, ಖೋಖೋ, ಕಬಡ್ಡಿ, ಟೇಬಲ್ ಟೆನ್ನಿಸ್, ಈಜು, ಟೆನ್ನಿಸ್ ಹಾಗೂ ಬ್ಯಾಡ್ಮಿಂಟನ್ ಸ್ಪರ್ಧೆಗಳು ಹಾಗೂ ಮಹಿಳೆಯರಿಗೆ ಖೋ-ಖೋ, ಕಬಡ್ಡಿ, ಟೇಬಲ್ ಟೆನ್ನಿಸ್, ಈಜು, ಟೆನ್ನಿಸ್ ಹಾಗೂ ಬ್ಯಾಡ್ಮಿಂಟನ್ ಸ್ಪರ್ಧೆಗಳು ನಡೆಯಲಿವೆ. ವಿಭಾಗಮಟ್ಟದಿಂದ ನೇರವಾಗಿ ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲು ಜೂಡೋ ಸ್ಪರ್ಧೆಯನ್ನು ಪುರುಷ ಹಾಗೂ ಮಹಿಳೆಯರಿಗೆ ಆಯೋಜಿಸಿದ್ದು, ಇದರ ಆಯ್ಕೆ ಪ್ರಕ್ರಿಯೆಯು ಅಕ್ಟೋಬರ್ 1 ರಂದು ಚಿಕ್ಕಮಗಳೂರಿನ ಜ್ಯೋತಿ ನಗರದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕುರಿತು ಜೂಡೋ ತರಬೇತುದಾರರ ರವಿ ಮೊ.ನಂ: 7989495494 ಅವರನ್ನು ಸಂಪರ್ಕಿಸಬಹುದಾಗಿದೆ. ಸ್ಪರ್ಧೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ ದೂ.ಸಂಖ್ಯೆ: 0820-2521324, ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.