



ರಾಹುಲ್ ಅಥಣಿ ಬೆಳಗಾವಿ
ಅಥಣಿ: ತಾಲೂಕಿನ ಹಲ್ಯಾಳ ಗ್ರಾಮದ ಕೃಷ್ಣಾ ನದಿ ಪಕ್ಕದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಸುಮಾರು ಎರಡು ವರ್ಷದ ಬಾಲಕಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರ ಸಹಾಯದಿಂದ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಗ್ರಾಮಸ್ಥರೆಲ್ಲ ಸೇರಿ ಆ ಪುಟ್ಟ ಬಾಲಕಿಯನ್ನು ರಕ್ಷಿಸಲಾಗಿದೆ
ನಂತರದಲ್ಲಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯಾದ ನಿರ್ಮಲಾ ಬನಸೋಡೆ ಮಾತನಾಡಿ ಬಾಲಕಿಯು ಈಗ ಚೇತರಿಸಿಕೊಳ್ಳುತ್ತಿದ್ದು ದೇಹದಲ್ಲಿ ಸ್ವಲ್ಪ ಸುಟ್ಟ ಗಾಯಗಳಾಗಿದ್ದು ಆದಷ್ಟು ಬೇಗ ಈ ಮಗು ಗುಣಮುಖವಾಗುತ್ತದೆ ಎಂದರು
ಇದೇ ಸಂದರ್ಭದಲ್ಲಿ ಆಸ್ಪತ್ರೆ ಸಿಬ್ಬಂದಿಗಳು ಹಾಗೂ ಸ್ಥಳೀಯ ಗ್ರಾಮಸ್ಥರ ನೆರವಿನಿಂದ ಪುಟ್ಟ ಬಾಲಕಿಯನ್ನು ರಕ್ಷಿಸಲಾಗಿದೆ. ಈಕೆ ಎಲ್ಲಿಯವಳು? ಕಬ್ಬಿನ ಗದ್ದೆಗೆ ಕರೆದು ತಂದವರು ಯಾರು? ಇದೆಲ್ಲ ಅಂಶ ತನಿಖೆಯಿಂದ ತಿಳಿದು ಬರಬೇಕಾಗಿದೆ.ಅಥಣಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.