


ಮಂಗಳೂರು: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ (ಪೋಸ್ಟ್‌ಮಾರ್ಟಂ) ನಡೆಸಿದ್ದ ಸಿಬ್ಬಂದಿಗೆ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಪ್ರಕರಣದ ಆರಂಭದಿಂದ ಅಂತಿಮ ಹಂತದವರೆಗೆ ತನಿಖೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಸಿಬ್ಬಂದಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಪ್ರಕರಣದಲ್ಲಿ ಆರಂಭಿಕ ಹಂತದಲ್ಲಿ ಸಾಕ್ಷ್ಯ ನಾಶಪಡಿಸಿದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆ ಮುಂದಾಗಿದ್ದಾರೆ. ಅಕ್ಟೋಬರ್ 30ರ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.
ಇದೇ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿ ಯೋಗೇಶ್ ಗೌಡ ಅವರಿಗೂ ಈ ಹಿಂದೆ ಎಸ್‌ಐಟಿ ನೋಟಿಸ್ ನೀಡಿತ್ತು. ತನಿಖೆಯ ಪ್ರಾಥಮಿಕ ಹಂತದಲ್ಲಿ ಸಾಕ್ಷ್ಯ ನಾಶಪಡಿಸಿದ ಆರೋಪ ಅವರ ವಿರುದ್ಧವೂ ಕೇಳಿಬಂದಿತ್ತು. ಇದೀಗ ಪ್ರಕರಣದ ಮರುತನಿಖೆಯ ಭಾಗವಾಗಿ ಸಂಬಂಧಪಟ್ಟ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲು ಎಸ್‌ಐಟಿ ಮುಂದಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.