logo
WhatsApp Image 2026-04-02 at 14.46.04.jpeg
hindalco everlast.jpeg

ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
23 May 2025
post image

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಒಟ್ಟಾರೇ ಶೇ. 35ರಷ್ಟು ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಭರ್ತಿಯಾಗದೇ ಉಳಿದಿರುವ ಸೀಟುಗಳಿಗೆ, ಮೂಲ ದಾಖಲೆಯೊಂದಿಗೆ ಸಂಸ್ಥೆಗೆ ಭೇಟಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ದೂರವಾಣಿ ಸಂಖ್ಯೆ: 0820-2570244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.