



ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪಿ.ಯು.ಸಿ ವಿದ್ಯಾರ್ಹತೆಗೆ ತತ್ಸಮಾನವೆಂದು ಪರಿಗಣಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶರಣಪ್ಪ ನಡವಳಿ ಹೊರಡಿಸಿದ್ದು, ಮೂರು ವರ್ಷಗಳ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪಿಯುಸಿ ವಿದ್ಯಾರ್ಹತೆಗೆ ತತ್ಸಮಾನವೇ ಎಂಬ ವಿಷಯವನ್ನು ನಿರ್ಧರಿಸುವ ಸಂಬಂಧ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.ನೇರ ನೇಮಕಾತಿ, ಅನುಕಂಪದ ಆಧಾರದ ನೇಮಕಾತಿ ಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯುಲು ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಶಿಕ್ಷಣವನ್ನು ಪಿ.ಯು.ಸಿ ಗೆ ತತ್ಸಮಾನವೆಂದು ಪರಿಗಣಿಸುವುದು. 2015ಕ್ಕಿಂತ ಹಿಂದಿನ ವರ್ಷಗಳಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಕೆಪಿಎಸ್ಸಿಯಿಂದ ನಡೆಸುವ ಇಲಾಖಾ ಪರೀಕ್ಷೆಗಳ ಜೊತೆಗೆ, ಕನ್ನಡ ಭಾಷಾ ಪರೀಕ್ಷೆಯನ್ನು ತೇರ್ಗಡೆ ಹೊಂದುವುದು ಎಂಬುದಾಗಿ ಆದೇಶಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.