logo
WhatsApp Image 2026-04-02 at 14.46.04.jpeg
hindalco everlast.jpeg

ನಿರಾಶಾದಾಯಕ ಬಜೆಟ್ :ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್

ಟ್ರೆಂಡಿಂಗ್
share whatsappshare facebookshare telegram
7 Jul 2023
post image

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಈ ಬಾರಿಯ ಬಜೆಟ್ ನಿರಾಶಾದಾಯಕ ವಾಗಿದ್ದು ,ಬಿಜೆಪಿ ಸರ್ಕಾರದ ಅನೇಕ ಜನಪರ ಯೋಜನೆಗಳಿಗೆ ತಿಲಾಂಜಲಿ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೇ ಶ್ರೀಮತಿ ನಯನಾ ಗಣೇಶ್ ಪತ್ರಿಕಾ ಹೇಳಿಕೆ ಯಲ್ಲಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಬಜೆಟ್ ಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈ ಬಿಡುವ ಮೂಲಕ ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸುವ ಕಾರ್ಯ ಮಾಡಿದೆ. ವಿವೇಕ ಶಾಲೆ ಅಭಿವೃದ್ಧಿ ಯೋಜನೆ ರದ್ದು, ಅಗ್ನಿವಿರ್ ತರಬೇತಿ ಯೋಜನೆ, ಸ್ವಾಮಿ ವಿವೇಕಾನಂದರ ಯುವಶಕ್ತಿ ಯೋಜನೆ, ಮಹಿಳಾ ಸ್ತ್ರೀ ಸಾಮರ್ಥ್ಯ ಯೋಜನೆ, ಮಹಿಳೆಯರ ಸ್ವಸಹಾಯ ಸಂಘದ ಸಹಾಯಧನ ಗಳಿಗೆ ಖೊಕ್ ನೀಡಿಲಾಗಿದೆ. ಈ ಮೂಲಕ ದ್ವೇಷದ ರಾಜಕಾರಣವನ್ನು ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಹೊರಟಿದೆ. ಜಿಲ್ಲೆಗೊಂದು ಗೋ ಶಾಲೆ ಬಿಜೆಪಿ ಸರ್ಕಾರದ ಯೋಜನೆ ಯನ್ನು ಸರ್ಕಾರ ಕೈಬಿಡುವ ಮೂಲಕ ಓಲೈಕೆಯ ರಾಜಕಾರಣ ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಮುಂದಿನ ದಿನ ರಾಜ್ಯದ ಜನತೆ ತಕ್ಕ ಉತ್ತರ ಕಾಂಗ್ರೆಸ್ ಸರಕಾರಕ್ಕೆ ನೀಡಲಿದೆಯೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ನಯನಾ ಗಣೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.