



ಉಡುಪಿ: ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಉನ್ನತ ಅಧಿಕಾರಿಗಳೊಂದಿಗೆ ಶೀಘ್ರದಲ್ಲಿಯೇ ಸಭೆ ನಡೆಸಿ, ಸಮಸ್ಯೆಗಳ ಬಗ್ಗೆ ಚರ್ಚಿಸಿ, ಎಲ್ಲಾ ಸಮಸ್ಯೆಗಳನ್ನು ನಿಗಧಿತ ಅವಧಿಯೊಳಗೆ ಪರಿಹರಿಸಲು ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು.
ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆ ಬಳಿಯ ಸಮಸ್ಯೆ, ಉಡುಪಿ- ಮಣಿಪಾಲ ಹೆದ್ದಾರಿಯಲ್ಲಿ ಬೀದಿ ದೀಪ ವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಸಿಗ್ನಲ್ ಅಳವಡಿಕೆ ಈ ಎಲ್ಲಾ ಸಮಸ್ಯೆಗಳ ಕುರಿತಂತೆ ಆ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಗುವುದು ಮತ್ತು ಸಂಬಂಧಪಟ್ಟ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು ಎಂದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.