logo
WhatsApp Image 2026-04-02 at 14.46.04.jpeg
hindalco everlast.jpeg

ಕನ್ನಡ ಭಾಷೆಯ ನಾಮಫಲಕ ದೊಡ್ಡದಾಗಿ ಎದ್ದುಕಾಣುವಂತೆ ಪ್ರದರ್ಶಿಸಿ

ಟ್ರೆಂಡಿಂಗ್
share whatsappshare facebookshare telegram
24 Jan 2024
post image

ಉಡುಪಿ: ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆ. ಆಡಳಿತದ ಎಲ್ಲಾ ಹಂತದಲ್ಲೂ ಕನ್ನಡ ಬಳಕೆ ಆಗಬೇಕೆನ್ನುವ ಹಿತದೃಷ್ಠಿಯಿಂದ, ನಮ್ಮ ನಾಡಿನ ರಾಜ್ಯ ಭಾಷೆ ಕನ್ನಡದ ಉಳಿವಿಗಾಗಿ ಮತ್ತು ನಮ್ಮ ಸಂಸ್ಕೃತಿ ತಿಳಿದುಕೊಳ್ಳುವ ಸಲುವಾಗಿ ಎಲ್ಲಾ ಅಂಗಡಿ, ಮುಂಗಟ್ಟು, ಹೋಟೆಲ್ ಹಾಗೂ ಕಂಪನಿಗಳು ಕನ್ನಡದ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ.

ಆದ್ದರಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗಡಿ, ಮುಂಗಟ್ಟು, ಹೋಟೆಲ್ ಹಾಗೂ ಕಂಪನಿಗಳು ಇತರೆ ಭಾಷೆಯ ನಾಮಫಲಕಕ್ಕಿಂತ ಕನ್ನಡ ಭಾಷೆಯ ನಾಮಫಲಕವನ್ನು ದೊಡ್ಡದಾಗಿ ಎದ್ದುಕಾಣುವಂತೆ ಅಳವಡಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.