logo
WhatsApp Image 2026-04-02 at 14.46.04.jpeg
hindalco everlast.jpeg

ರಾಹುಲ್ ಗಾಂಧಿ ಅನರ್ಹತೆ ರದ್ದು: ಸ್ಪೀಕರ್ ಆದೇಶ

ಟ್ರೆಂಡಿಂಗ್
share whatsappshare facebookshare telegram
7 Aug 2023
post image

ನವದೆಹಲಿ: ಮೋದಿ ಉಪನಾಮ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಿಸಲಾಗಿದ್ದ ಎರಡು ವರ್ಷಗಳ ಜೈಲು ಶಿಕ್ಷೆಗೆ ಶುಕ್ರವಾರ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದ ಹಿನ್ನೆಲೆ ಲೋಕಸಭೆ ಸದಸ್ಯತ್ವ ಅನರ್ಹತೆ ರದ್ದುಗೊಳಿಸಿ ಸ್ಪೀಕರ್ ಓಂ ಬಿರ್ಲಾ ಆದೇಶ ಹೊರಡಿಸಿದ್ದಾರೆ.

ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಸಂಸತ್ ಸ್ಥಾನದಿಂದ ಅನರ್ಹಗೊಳಿಸಲಾಗಿದ್ದ ಆದೇಶವನ್ನು ವಾಪಸ್ ಪಡೆಯಲಾಗಿದ್ದು, ಅವರ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ ಎಂದು ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆ ಹೊರಡಿಸಿದೆ.

ರಾಹುಲ್ ಗಾಂಧಿ ಅನರ್ಹತೆ ರದ್ದುಗೊಳಿಸುವಂತೆ ಕಾಂಗ್ರೆಸ್ ನಾಯಕರು ಶುಕ್ರವಾರವೇ ಸ್ಪೀಕರ್ ಗೆ ಮನವಿ ಮಾಡಿದ್ದರು. ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ಗೊತ್ತುವಳಿಯಲ್ಲಿ ರಾಹುಲ್ ಗಾಂಧಿ ಕೂಡ ಪಾಲ್ಗೊಳ್ಳಬೇಕು ಎಂಬುದು ಕಾಂಗ್ರೆಸ್ ನಾಯಕರ ಒತ್ತಾಯವಾಗಿತ್ತು.

2019ರಲ್ಲಿ ಕೋಲಾರದಲ್ಲಿ ನಡೆಸಿದ ಚುನಾವಣಾ ಭಾಷಣವೊಂದರಲ್ಲಿ ರಾಹುಲ್ ಗಾಂಧಿ ಅವರು, ಮೋದಿ ಉಪನಾಮ ಹೊಂದಿರುವವರೆಲ್ಲ ಕಳ್ಳರೇ ಆಗಿರುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ ಎಂದು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಕ್ರಿಮಿನಲ್ ಮಾನಹಾನಿ ಪ್ರಕರಣದಡಿಯಲ್ಲಿ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ಇದಕ್ಕೆ ತಡೆ ನೀಡುವಂತೆ ಸಲ್ಲಿಸಿದ್ದ ಮೇಲ್ಮನವಿಯನ್ನು ನಿರಾಕರಿಸಿದ ಗುಜರಾತ್ ಹೈಕೋರ್ಟ್‌ ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಶಿಕ್ಷೆಗೆ ಮಧ್ಯಂತರ ತಡೆ ನೀಡಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.