



ಉಡುಪಿ, : ಕೇಂದ್ರ ಸರ್ಕಾರವು ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಆಚರಣೆ ಹಿನ್ನೆಲೆ, ರಾಷ್ಟಿçÃಯ ಭದ್ರತಾ ಕಾಯ್ದೆಯ ಜೊತೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಸಾರ್ವಜನಿಕರಿಗೆ ಉಚಿತ ಪಡಿತರ ವಿತರಿಸುವ ಯೋಜನೆ ಜಾರಿಗೊಳಿಸಿರುತ್ತದೆ. ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಎನ್.ಎಫ್.ಎಸ್.ಎ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಬಿಡುಗಡೆಯಾದ ಆಹಾರ ಧಾನ್ಯವನ್ನು ಏಪ್ರಿಲ್ ನಿಂದ ಅಂತ್ಯೋದಯ (ಎ.ಎ.ವೈ) ಚೀಟಿದಾರರಿಗೆ ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ ೩೫ ಕೆ.ಜಿ ಅಕ್ಕಿ ಹಾಗೂ ಪಿ.ಎಂ.ಜಿ.ಕೆ.ಎ.ವೈ ಯೋಜನೆಯಡಿ ಪ್ರತಿ ಸದಸ್ಯರಿಗೆ ೫ ಕೆಜಿ. ಅಕ್ಕಿ, ಆದ್ಯತಾ ಪಡಿತರ ಚೀಟಿದಾರರಿಗೆ ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಸದಸ್ಯರಿಗೆ ೫ ಕೆ.ಜಿ ಅಕ್ಕಿ, ಒ.ಎಮ್.ಎಸ್.ಎಸ್ ಯೋಜನೆಯಡಿ ಪ್ರತಿ ಸದಸ್ಯರಿಗೆ ಹೆಚ್ಚುವರಿ ೧ ಕೆ.ಜಿ ಅಕ್ಕಿ ಹಾಗೂ ಪಿ.ಎಂ.ಜಿ.ಕೆ.ಎ.ವೈ ಯೋಜನೆಯಡಿ ಪ್ರತಿ ಸದಸ್ಯರಿಗೆ ೫ ಕೆ.ಜಿ ಅಕ್ಕಿ ವಿತರಿಸಲಾಗುವುದು. ಆದ್ಯತೇತರ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಪ್ರತಿ ಕೆ.ಜಿ ಗೆ ೧೫ ರೂ. ನಂತೆ ಏಕ ಸದಸ್ಯ ಪಡಿತರ ಚೀಟಿಗೆ ೫ ಕೆ.ಜಿ ಅಕ್ಕಿ ಹಾಗೂ ಒಂದಕ್ಕಿAತ ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ ೧೦ ಕೆ.ಜಿ ಅಕ್ಕಿ ವಿತರಿಸಲಾಗುವುದು. ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲಾ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಬಹುದಾಗಿದ್ದು, ಬೇರೆ ರಾಜ್ಯದ ಪಡಿತರ ಚೀಟಿದಾರರು ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಕೆ.ಜಿ ಗೆ ೩ ರ ರೂ. ಪಾವತಿಸಿ ಪಡಿತರ ಪಡೆಯಬಹುದಾಗಿದೆ. ಪಡಿತರ ಚೀಟಿದಾರರು ಹಂಚಿಕೆ ಮಾಡಿದ ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬAದಲ್ಲಿ ಅಂತಹ ಪಡಿತರ ಚೀಟಿಯನ್ನು ರದ್ದುಪಡಿಸಲಾಗುವುದು. ಪಡಿತರ ವಿತರಣೆ ಕುರಿತು ದೂರುಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ: ೧೯೬೭, ತಹಶೀಲ್ದಾರ್ ಕಚೇರಿ ಅಥವಾ ಉಪ ನಿರ್ದೇಶಕರ ಕಚೇರಿಗ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.