



ಉಡುಪಿ: ಕೃಷಿ ಇಲಾಖೆಯ ವತಿಯಿಂದ ಅಂತರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಅಂಗವಾಗಿ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಬಹುದಾಗಿದೆ.
ಅಭ್ಯರ್ಥಿಗಳು ತಮ್ಮ ಭಾವ ಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿ, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿಸೆಂಬರ್ 10 ರ ಒಳಗಾಗಿ ಇ-ಮೇಲ್ agrijdaudupi@gmail.com ಅಥವಾ ಖುದ್ದಾಗಿ/ಪೋಸ್ಟ್ ಮೂಲಕ ಜಂಟಿ ಕೃಷಿ ನಿರ್ದೇಶಕರ ಕಛೇರಿ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿ ಸ್ಪರ್ಧಿಯು ಸಿಹಿ ಅಥವಾ ಖಾರ (ಸಸ್ಯಾಹಾರಿ ತಿನಿಸುಗಳು ಮಾತ್ರ) ಒಂದೇ ತಿನಿಸು ತಯಾರಿಸುವ ಅವಕಾಶವಿದ್ದು, ಅರ್ಜಿಯಲ್ಲಿ ನಮೂದಿಸಿದ ತಿನಿಸುಗಳನ್ನು, ಮನೆಯಲ್ಲಿಯೇ ತಯಾರಿಸಿ, ಡಿ. 14 ರಂದು ಬೆಳಗ್ಗೆ 11 ಗಂಟೆಗೆ ಜಂಟಿ ಕೃಷಿ ನಿರ್ದೇಶಕರ ಕಛೇರಿಯಲ್ಲಿ ನಡೆಯುವ ಸ್ಪರ್ಧೆಯಲ್ಲಿ ಪ್ರದರ್ಶಿಸಬೇಕು. ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದವರು ಡಿ. 23 ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.