



ಉಡುಪಿ, ಮಾರ್ಚ್ 06: ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಉಡುಪಿ ಜಿಲ್ಲೆ ಇವರ ವತಿಯಿಂದ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನ ಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವ ಸಲುವಾಗಿ ಮಾರ್ಚ್ 7 ರಿಂದ ಮಾಚ್ 10 ರವರೆಗೆ ನಗರದ ಮಲ್ಪೆ ಬೀಚ್‌ನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಉದ್ಘಾಟನಾ ಸಮಾರಂಭವು ಮಾ. 7 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.
ಮಾರಾಟ ಮೇಳದಲ್ಲಿ ಮಹಿಳೆಯರು ತಯಾರಿಸಿದ ಗೃಹ ಉಪಯೋಗಿ ವಸ್ತುಗಳು, ಕರಕುಶಲ ವಸ್ತುಗಳು, ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಆಯುರ್ವೇದಿಕ್ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, ಪಾಸ್ಟ್ ಫುಡ್ ಇತ್ಯಾದಿ ಉತ್ಪನ್ನಗಳು ಲಭ್ಯವಿದ್ದು, ಪ್ರತಿ ದಿನ ಸಂಜೆ 6 ಗಂಟೆಯಿ೦ದ ರಾತ್ರಿ 9 ಗಂಟೆಯ ವರೆಗೆ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ಅವರ ಪ್ರತಿಭೆಗೆ ಪ್ರೋತ್ಸಾಹ ನೀಡುವಂತೆ ಜಿಲ್ಲಾ ಪಂಚಾಯತ್ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.