logo
WhatsApp Image 2026-04-02 at 14.46.04.jpeg
hindalco everlast.jpeg

ಹಿರಿಯ ನಾಗರಿಕರಿಗೆ ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಟ್ರೆಂಡಿಂಗ್
share whatsappshare facebookshare telegram
16 Sept 2023
post image

ಉಡುಪಿ,: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಸೆ. 22 ರಂದು ಬೆಳಗ್ಗೆ 9.30 ಕ್ಕೆ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ತಮ್ಮ ಗುರುತು ಚೀಟಿ ಅಥವಾ ವಯಸ್ಸಿನ ಅಧಿಕೃತ ದಾಖಲೆಗಳೊಂದಿಗೆ ಈ ಕೆಳಕಂಡ ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ.

ಕ್ರೀಡಾ ಸ್ಪರ್ಧೆಗಳು: 60-69 ವರ್ಷ, 70-79 ವರ್ಷ ಮತ್ತು 80 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗದಲ್ಲಿ ನಡಿಗೆ, ರಿಂಗನ್ನು ಬಕೆಟ್‌ನಲ್ಲಿ ಎಸೆಯುವುದು ಮತ್ತು ಬಾಂಬ್ ಇನ್ ದ ಸಿಟಿ ಸ್ಪರ್ಧೆಗಳು ನಡೆಯಲಿವೆ. ಸಾಂಸ್ಕೃತಿಕ ಸ್ಪರ್ಧೆಗಳು: 60-69 ವರ್ಷ, 70-79 ವರ್ಷ ಮತ್ತು 80 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರ ಪ್ರತ್ಯೇಕ ವಿಭಾಗದಲ್ಲಿ ಏಕಪಾತ್ರ ಅಭಿನಯ, ಗಾಯನ ಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆಗಳು ನಡೆಯಲಿವೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.